ನವದೆಹಲಿ: ಉತ್ತರಪ್ರದೇಶದ ಎಐಸಿಸಿ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ.
ಗಾಜಿಪುರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತ ತ್ರಿಭುವನ್ ಸಿಂಗ್ ಎಂಬುವವರು ಬ್ಲಾಕ್ ಅಧ್ಯಕ್ಷರೊಂದಿಗೆ ತಮ್ಮ ಪ್ರದೇಶದಲ್ಲಿ ನಡೆಯುತ್ತಿದ್ದ ನ್ಯಾಯ ಪಂಚಾಯತ್ ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ಈ ವೇಳೆ, ರಸ್ತೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಈ ಕುರಿತು ಮಾಹಿತಿ ಪಡೆದ ಪ್ರಿಯಾಂಕಾ ಗಾಂಧಿ ಮೃತ ಕಾರ್ಯಕರ್ತನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು.