ಪ್ರಯಾಗರಾಜ್ (ಉತ್ತರ ಪ್ರದೇಶ): ಮೌನಿ ಅಮಾವಾಸ್ಯೆ ಪ್ರಯುಕ್ತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಪ್ರಯಾಗರಾಜ್ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿ ಸೇರುತ್ತವೆ. ಇಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಿಯಾಂಕಾ, ಪ್ರಾರ್ಥನೆ ಸಲ್ಲಿಸಿದ್ದಾರೆ.