ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿಗೆ ಬುಧವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಭಾರತ್ ಜೋಡೋ ಮಧ್ಯಪ್ರದೇಶದ ಬುರ್ಹಾನ್ಪುರ ಪ್ರವೇಶಿಸುವಾಗ, ಪ್ರಿಯಾಂಕಾ ನಾಲ್ಕು ದಿನಗಳ ಕಾಲ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ - ಈಟಿವಿ ಭಾರತ ಕನ್ನಡ
ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಇತರ ನಾಯಕರು ಮತ್ತು ಕಾರ್ಯಕರ್ತರು ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಪ್ರಾರಂಭಿಸಿದ್ದರು.
ಇದನ್ನೂ ಓದಿ:ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ನಟಿ ರಿಯಾ ಸೇನ್