ಲಖನೌ(ಉತ್ತರಪ್ರದೇಶ) :ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ತಮ್ಮ ತಮ್ಮ ಅಭ್ಯರ್ಥಿಗಳ ಲಿಸ್ಟ್ ಕೂಡ ರಿಲೀಸ್ ಮಾಡಿವೆ. ಇದರ ಮಧ್ಯೆ ಪ್ರಿಯಾಂಕಾ ಗಾಂಧಿ ನೀಡಿರುವ ಹೇಳಿಕೆವೊಂದು ಇದೀಗ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.
ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂದು ಯುವಕರು ಮತ್ತು ಯುವತಿಯರಿಗೋಸ್ಕರ ಪ್ರತ್ಯೇಕ ಪ್ರಣಾಳಿಕೆ ರಿಲೀಸ್ ಮಾಡಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉತ್ತರಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಧ್ಯಮದವರು ಕೇಳಿರುವ ಪ್ರಶ್ನೆಗೆ ವಿಭಿನ್ನವಾಗಿ ಉತ್ತರಿಸಿದ್ದಾರೆ.
ಉತ್ತರಪ್ರದೇಶದ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರು ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ ಗಾಂಧಿ, 'ನಿಮಗೆ ಬೇರೆ ಮುಖ ಸಿಎಂ ಸ್ಥಾನಕ್ಕೆ ಕಾಣುತ್ತಿದೆಯೇ? ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದು' ಅಲ್ಲವೇ ಎಂದು ಹೇಳಿದ್ದಾರೆ. ಈ ಮೂಲಕ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ತಾವು ಎಂಬ ಸುಳಿವು ನೀಡಿದ್ದಾರೆ.