ನವದೆಹಲಿ :ಜಮ್ಮು ಮತ್ತು ಕಾಶ್ಮೀರ ಜನರಿಗಾಗಿ ಜಾರಿಗೆ ತಂದಿರುವ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎ)-ಸೇಹತ್ಗೆ ಶನಿವಾರ ಚಾಲನೆ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಅಮಿತ್ ಶಾ, ಬಹುಶಃಪ್ರತಿಯೊಬ್ಬ ನಾಗರಿಕರೂ ಈ ಯೋಜನೆಯ ಲಾಭ ಪಡೆದ ಮೊದಲ ರಾಜ್ಯ/ಕೇಂದ್ರಾಡಳಿತ ಪ್ರದೇಶ ಅಂದ್ರೆ ಅದುಜಮ್ಮು-ಕಾಶ್ಮೀರ ಅಂತಾ ಹೇಳಿದ್ದಾರೆ. ಜಮ್ಮು-ಕಾಶ್ಮೀರ ಹೊರತುಪಡಿಸಿ ದೇಶದ ಉಳಿದ ಭಾಗಗಳಲ್ಲಿ ಆಯುಷ್ಮಾನ್ ಭಾರತ್ ಪಿಎಂಜೆಎವೈ ಬಡವರಿಗೆ ಮಾತ್ರ ಲಭ್ಯವಿದೆ.
PMJAY-SEHAT ಯೋಜನೆಯು ಜಮ್ಮು ಮತ್ತು ಕಾಶ್ಮೀರದೊಂದಿಗೆ ಪ್ರಧಾನ ಮಂತ್ರಿಯ ಬಾಂಧವ್ಯ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮಾಡಿದ ಪ್ರಯತ್ನಗಳ ಫಲವಾಗಿದೆ. ಇಂದಿನಿಂದ ಕಾಶ್ಮೀರಿಗರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ”ಎಂದು ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಿಎಂಜೆ-ಸೇಹತ್ ಯೋಜನೆ ಲಾಂಚಿಂಗ್ ಮಾಡುವಾಗ ಹೇಳಿದ್ರು.
ಈ ಮಹತ್ವದ ಆರಂಭವು ಮುಂದಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲಿದೆ ಎಂದು ಅಮಿತ್ ಶಾ ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಸುಮಾರು 229 ಸರ್ಕಾರಿ ಮತ್ತು 35 ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯ ಸೌಲಭ್ಯ ಪಡೆಯಬಹುದು. ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳು ಸುಮಾರು 5 ಲಕ್ಷದವರೆಗಿನ ಎಲ್ಲಾ ವೆಚ್ಚಗಳನ್ನು ಭಾರತ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರ ಆಡಳಿತವು ಭರಿಸಲಿದೆ.
ಸುಮಾರು 15 ಲಕ್ಷ ಕುಟುಂಬಗಳು 5 ಲಕ್ಷ ರೂ.ವರೆಗಿನ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಪಡೆಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವರು ಮಾಹಿತಿ ನೀಡಿದ್ರು. ಈ ಯೋಜನೆಯು ಜಮ್ಮು ಮತ್ತು ಕಾಶ್ಮೀರದ ಆರೋಗ್ಯ ಮೂಲಸೌಕರ್ಯಕ್ಕೆ ಮತ್ತಷ್ಟು ಉತ್ತೇಜನ ನೀಡುತ್ತದೆ ಎಂದು ಶಾ ಹೇಳಿದ್ರು.