ಹೊಸದಿಲ್ಲಿ:ಮಾಜಿ WWE ಸ್ಟಾರ್, ಖ್ಯಾತ 'ದಿ ಗ್ರೇಟ್ ಖಲಿ' ದಲೀಪ್ ಸಿಂಗ್ ರಾಣಾ ಅವರು ಇಂದು (ಗುರುವಾರ) ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ಪಕ್ಷದ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ರಾಷ್ಟ್ರ ನಾಯಕರು ಅವರನ್ನು ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ಸೇರಿದ್ದಕ್ಕೆ ನನಗೆ ಖುಷಿಯಾಗಿದೆ. ಪ್ರಧಾನಿ ಮೋದಿಯವರು ದೇಶಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಕೆಲಸಗಳೇ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲಿದೆ. ರಾಷ್ಟ್ರದ ಅಭಿವೃದ್ಧಿಗಾಗಿ ಅವರ ಆಡಳಿತದ ಭಾಗವಾಗವಾಗಬೇಕೆಂದು ಆಸೆ ಇಟ್ಟುಕೊಂಡಿದ್ದೆ. ಹಾಗಾಗಿ ಬಿಜೆಪಿಯ ರಾಷ್ಟ್ರೀಯ ನೀತಿಯಿಂದ ಪ್ರಭಾವಿತನಾಗಿ ಪಕ್ಷ ಸೇರಿದ್ದೇನೆ ಎಂದು ಖಲಿ ಹೇಳಿದ್ದಾರೆ.