ಫಿರೋಜಾಬಾದ್(ಉತ್ತರ ಪ್ರದೇಶ): ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅಶ್ಲೀಲವಾಗಿ ಬರೆದಿರುವ ಆರೋಪದ ಮೇಲೆ ಪ್ರಾಧ್ಯಾಪಕನೋರ್ವನನ್ನು ಬಂಧಿಸಲಾಗಿದೆ. ಶಹರ್ಯಾರ್ ಅಲಿ ಎಂಬಾತ ಬಂಧಿತ ಆರೋಪಿ.
ಫಿರೋಜಾಬಾದ್ನಲ್ಲಿರುವ ಎಸ್ಆರ್ಕೆ ಕಾಲೇಜ್ನಲ್ಲಿ ಶಹರ್ಯಾರ್ ಅಲಿ ಇತಿಹಾಸ ವಿಭಾಗದ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ಫೇಸ್ಬುಕ್ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ವಿರುದ್ಧ ಅಶ್ಲೀಲವಾಗಿ ಬರೆದುಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಕೋರ್ಟ್ಗೆ ಶರಣಾಗಿರುವ ಅವರನ್ನ ಪೊಲೀಸರ ವಶಕ್ಕೆ ನೀಡಲಾಗಿದೆ.