ಕರ್ನಾಟಕ

karnataka

ETV Bharat / bharat

ನೂಪುರ್​​ ಹೇಳಿಕೆ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ.. ರಾಂಚಿಯಲ್ಲಿ ಇಬ್ಬರು ಸಾವು

ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್‌ ಕುರಿತು ನೀಡಿರುವ ವಿವಾದಿತ ಹೇಳಿಕೆ ಖಂಡಿಸಿ, ದೇಶದ ಬಹುತೇಕ ಎಲ್ಲ ನಗರಗಳಲ್ಲೂ ನಿನ್ನೆ ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಜಾರ್ಖಂಡ್​ನಲ್ಲಿ ಹಿಂಸಾಚಾರ ಉಂಟಾಗಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

Prophet remarks row
Prophet remarks row

By

Published : Jun 11, 2022, 9:59 AM IST

ರಾಂಚಿ(ಜಾರ್ಖಂಡ್​): ಪ್ರವಾದಿ ಮಹಮ್ಮದ್ ಪೈಂಗಬರ್​​​​ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ, ಮುಸ್ಲಿಂ ಸಂಘಟನೆಗಳಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೂಪುರ್ ಶರ್ಮಾ ವಿರುದ್ಧ ನಿನ್ನೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಯಿತು. ಈ ವೇಳೆ, ಕೆಲವೊಂದು ನಗರಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ರಾಂಚಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ನೂಪುರ್ ಹೇಳಿಕೆಗೆ ಜಾರ್ಖಂಡ್​ನ ರಾಂಚಿಯಲ್ಲೂ ಆಕ್ರೋಶ ವ್ಯಕ್ತಪಡಿಸಿ, ಮುಸ್ಲಿಂ ಸಂಘಟನೆ ಪ್ರತಿಭಟನೆ ನಡೆಸಿದವು. ಈ ವೇಳೆ, ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ನಡೆದಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ವೇಳೆ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಅನೇಕರು ಗಾಯಗೊಂಡಿದ್ದಾರೆ. ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಪ್ರವಾದಿ ಮಹಮ್ಮದ್​ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಈಗಾಗಲೇ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್​ ಶರ್ಮಾ ವಿರುದ್ಧ ನಿನ್ನೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರದ ಪ್ರಾರ್ಥನೆ ಮುಕ್ತಾಯಗೊಳ್ಳುತ್ತಿದ್ದಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರು ಏಕಾಏಕಿ ಪ್ರತಿಭಟನೆ ನಡೆಸಲು ಬೀದಿಗಿಳಿದರು. ಉತ್ತರಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಹತೋಟಿಗೆ ತರುವ ಉದ್ದೇಶದಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಇದನ್ನೂ ಓದಿ:ನೂಪುರ್ ಹೇಳಿಕೆ​ ಖಂಡಿಸಿ ದೇಶದ ಹಲವೆಡೆ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು

ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಕಾರು, ಬೈಕ್​​​ಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಇಟ್ಟಿದ್ದಾರೆ. ಪ್ರಮುಖವಾಗಿ ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಮ್ಮು - ಕಾಶ್ಮೀರ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್​​ನಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆದಿವೆ.

ABOUT THE AUTHOR

...view details