ಕರ್ನಾಟಕ

karnataka

ETV Bharat / bharat

ಗರ್ಲ್ಸ್‌ ಹಾಸ್ಟೆಲ್ ವಿಡಿಯೋ ಸೋರಿಕೆ: ಚಂಡಿಗಢ ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ - ಮೊಹಾಲಿ ಪೊಲೀಸ್

ಹಾಸ್ಟೆಲ್‌ನಲ್ಲಿದ್ದ ಹುಡುಗಿಯೊಬ್ಬಳು ಇತರೆ ಹುಡುಗಿಯರ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಇತರರೊಂದಿಗೆ ಹಂಚಿಕೊಂಡಿರುವ ಗಂಭೀರ ಆರೋಪ ಎದುರಿಸುತ್ತಿದ್ದಾಳೆ. ಆರೋಪಿ ಹುಡುಗಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ, ವಿದ್ಯಾರ್ಥಿನಿಯರು ದೊಡ್ಡ ಸಂಖ್ಯೆಯಲ್ಲಿ ಸೇರಿ ರಾತ್ರಿ ಪ್ರತಿಭಟನೆ ನಡೆಸಿದರು.

chandigarh university
ಚಂಡಿಗಢ ವಿವಿಯಲ್ಲಿ ಉದ್ವಿಗ್ನ ಪರಿಸ್ಥಿತಿ

By

Published : Sep 18, 2022, 10:16 AM IST

Updated : Sep 18, 2022, 11:46 AM IST

ಚಂಡೀಗಢ: ಹುಡುಗಿಯೊಬ್ಬಳು ತನ್ನ ಹಾಸ್ಟೆಲ್‌ ಸಹಪಾಠಿಗಳು ಸ್ನಾನ ಮಾಡುತ್ತಿರುವ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಇತರರ ಜೊತೆ ಹಂಚಿಕೊಂಡಿದ್ದಾಳೆ ಎನ್ನಲಾದ ಪ್ರಕರಣವೊಂದು ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಉಂಟು ಮಾಡಿದೆ. ಆರೋಪಿ ಹುಡುಗಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ಘಟನೆಯಿಂದ ವಿದ್ಯಾರ್ಥಿನಿಯರು ರೊಚ್ಚಿಗೆದ್ದಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹುಡುಗಿಯೊಬ್ಬಳು ತಮ್ಮ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಹಂಚಿಕೊಂಡಿದ್ದಾಳೆ ಎಂದು ಇತರೆ ಹಾಸ್ಟೆಲ್ ಹುಡುಗಿಯರು ಆರೋಪಿಸಿದ್ದರು. ಈ ಹಿನ್ನೆಲೆಯನ್ನು ಆರೋಪಿಯನ್ನು ನಾವು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಖಾಸಗಿ ವಿವಿಯ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಯತ್ನ ನಡೆಸಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಮಾಹಿತಿಯನ್ನು ವಿವಿ ಆಡಳಿತ ಮತ್ತು ಮೊಹಾಲಿ ಪೊಲೀಸರು ಅಲ್ಲಗಳೆದಿದ್ದಾರೆ.

ಇದನ್ನೂ ಓದಿ:ಸರ್ಕಾರಿ ನೌಕರನಿಗೆ ಖಾಸಗಿ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಆರೋಪ: ಮೂವರ ಬಂಧನ

ಈ ಕುರಿತು ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್‌ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಗಳು ಸಂಯಮ ಕಾಪಾಡಬೇಕು ಎಂದು ಮನವಿ ಮಾಡಿದರು. ತಪ್ಪು ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಇದು ತುಂಬಾ ಸೂಕ್ಷ್ಮ ವಿಷಯ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ನಾವು ಹಾಗು ಮಾಧ್ಯಮದವರೂ ಕೂಡಾ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರಕರಣದಿಂದ ತೀವ್ರವಾಗಿ ಆಘಾತಕ್ಕೊಳಗಾದ ವಿದ್ಯಾರ್ಥಿನಿಯೋರ್ವಳು ಮೂರ್ಛೆ ತಪ್ಪಿ ಬಿದ್ದಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಹಾಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೈಬರ್‌ ಕ್ರೈಂ ವಿಭಾಗವೂ ತನಿಖೆಯಲ್ಲಿ ತೊಡಗಿದೆ.

ಇದನ್ನೂ ಓದಿ:ಖಾಸಗಿ ವಿಡಿಯೋ ಇಟ್ಟುಕೊಂಡು ಹಣಕ್ಕೆ ಡಿಮ್ಯಾಂಡ್ ಮಾಡ್ತಿದ್ದ ಪ್ರೇಮಿಗಳ ಬಂಧನ

Last Updated : Sep 18, 2022, 11:46 AM IST

ABOUT THE AUTHOR

...view details