ನವದೆಹಲಿ: ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮುಖ್ಯಮಂತ್ರಿ ನಾರಾಯಣಸ್ವಾಮಿ ಸರ್ಕಾರ ಇದೀಗ ಸಂಕಷ್ಟಕ್ಕೆ ಸಿಲುಕೊಂಡಿದ್ದು, ಫೆ. 22ರ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸುವಂತೆ ನೂತನ ಗವರ್ನರ್ ತಮಿಳ್ಸಾಯಿ ಸೌಂದರ್ರಾಜನ್ ಆದೇಶ ನೀಡಿದ್ದಾರೆ.
2016ರಲ್ಲಿ ನಡೆದ ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ 15 ಕಾಂಗ್ರೆಸ್ ಶಾಸಕರು ಗೆಲುವು ದಾಖಲು ಮಾಡಿದ್ದು. ಇದಾದ ಬಳಿಕ ಅನೇಕ ಶಾಸಕರು, ಸಚಿವರು ರಾಜೀನಾಮೆ ನೀಡಿರುವ ಕಾರಣ ಸರ್ಕಾರ ಅಲ್ಪ ಮತಕ್ಕೆ ಕುಸಿತಗೊಂಡಿದ್ದು, ಹೀಗಾಗಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ.
33 ಶಾಸಕರನ್ನು ಹೊಂದಿರುವ ಪುದುಚೇರಿ ವಿಧಾನಸಭೆಯಲ್ಲಿ ಇದೀಗ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ 14 ಸದಸ್ಯರ ಬಲ ಹೊಂದಿವೆ. ಇದೇ ಕಾರಣಕ್ಕಾಗಿ ಬಹುಮತ ಸಾಬೀತುಪಡಿಸುವಂತೆ ನೂತನ ಲೆಪ್ಟಿನೆಂಟ್ ಗವರ್ನರ್ ಆದೇಶ ನೀಡಿದ್ದಾರೆ.
ಇದರ ಬೆನ್ನಲ್ಲೇ ಪುದುಚೇರಿ ಬಿಜೆಪಿ ಅಧ್ಯಕ್ಷ ವಿ. ಸಾಮಿನಾಥನ್ ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ನಾರಾಯಣಸ್ವಾಮಿ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗವರ್ನರ್ ಭೇಟಿ ಮಾಡಿರುವ ಮುಖ್ಯಮಂತ್ರಿ ಇದೇ ವಿಚಾರವಾಗಿ ಚರ್ಚೆ ನಡೆಸಿದ್ದಾಗಿ ಹೇಳಿಕೊಂಡಿದ್ದಾರೆ. ಪುದುಚೇರಿಯಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಇದೇ ವೇಳೆ ಆರೋಪಿಸಿದ್ದಾರೆ. ಇನ್ನು ಕಳೆದ ಮೂರು ದಿನಗಳ ಹಿಂದೆ ಅಲ್ಲಿನ ಲೆಪ್ಟಿನೆಂಟ್ ಗವರ್ನರ್ ಆಗಿದ್ದ ಕಿರಣ್ ಬೇಡಿ ಅವರನ್ನ ರಾಷ್ಟ್ರಪತಿಗಳು ಪದಚ್ಯುತಗೊಳಿಸಿದ್ದರು.