ಶ್ರೀನಗರ :ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಸೋಮವಾರ(ಏ.18) ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿ ಶ್ರೀನಗರದ ಎಸ್‌ಹೆಚ್‌ಎಂಎಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್‌ಪೆಕ್ಟರ್ ದೇವ್ ರಾಜ್ ಮೃತರು. ಪುಲ್ವಾಮಾ ದಾಳಿಯಲ್ಲಿ ಗಾಯಗೊಂಡ ಇವರು ಎಸ್‌ಎಂಹೆಚ್‌ಎಸ್‌ನ ಐಸಿಯು ವಾರ್ಡ್ 17ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.