ಪುಣೆ(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ ಆಘಾತಕಾರಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನ ಮೇಲೆ ಅಪ್ಪ, ಚಿಕ್ಕಪ್ಪ, ಅಜ್ಜ ಸೇರಿ 6 ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 17 ವರ್ಷದ ಬಾಲಕಿ ಗಂಭೀರ ಆರೋಪ ಮಾಡಿದ್ದು, ಕೇಸ್ನಲ್ಲಿ ಆರೋಪಿ ತಂದೆಯನ್ನು ಬಂಧಿಸಲಾಗಿದೆ.
ಉತ್ತರಪ್ರದೇಶದ ಮೂಲದವರಾದ ಬಾಲಕಿಯ ಕುಟುಂಬ ಮಹಾರಾಷ್ಟ್ರದ ಪುಣೆಗೆ ಕೆಲ ವರ್ಷಗಳ ಹಿಂದೆ ಸ್ಥಳಾಂತರವಾಗಿತ್ತು. ಇಲ್ಲಿಯೇ ನೆಲೆಸಿದ್ದ ಆಕೆ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬುಧವಾರ ಕಾಲೇಜಿನಲ್ಲಿ ನಡೆದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕುರಿತಾದ ಕಾರ್ಯಕ್ರಮದಲ್ಲಿ ಬಾಲಕಿ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ಹೇಳಿಕೊಂಡಿದ್ದಾಳೆ.