ಪುಣೆ:ಕೋವಿಡ್ಎರಡನೇ ಅಲೆ ಮಹಾರಾಷ್ಟ್ರದಲ್ಲಿ ನಿಯಂತ್ರಣಕ್ಕೆ ಸಿಗದ ಕಾರಣ ಇದೀಗ ಅಲ್ಲಿನ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಪುಣೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರಗೆ ಕರ್ಫ್ಯೂ ವಿಧಿಸಲಾಗಿದೆ.
ಯಾವುದಕ್ಕೆಲ್ಲಾ ನಿರ್ಬಂಧ?
ಒಂದು ವಾರಗಳ ಕಾಲ ಈ ಕರ್ಫ್ಯೂ ಜಾರಿಯಲ್ಲಿರಲಿದೆ. ಧಾರ್ಮಿಕ ಸ್ಥಳಗಳು, ಹೋಟೆಲ್, ಶಾಪಿಂಗ್ ಮಾಲ್, ಸಿನಿಮಾ ಮಂದಿರ ಹಾಗೂ ಬಾರ್ಗಳು ಸಂಪೂರ್ಣವಾಗಿ ಬಂದ್ ಇರಲಿವೆ. ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಮುಖವಾಗಿ ಆಹಾರ, ಔಷಧಿ ಹಾಗೂ ಇತರೆ ಅವಶ್ಯಕ ವಸ್ತುಗಳ ಸಾಗಾಣಿಕೆ ಮಾಡಲು ಅವಕಾಶವಿದೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು 20 ಜನರಿಗೆ ಅವಕಾಶ ನೀಡಲಾಗಿದೆ. ಮದುವೆ ಕಾರ್ಯಕ್ರಮಗಳಲ್ಲಿ 50 ಜನರು ಭಾಗಿಯಾಗಬಹುದಾಗಿದೆ.