ಬೆಂಗಳೂರು:ಸ್ಯಾಂಡಲ್ವುಡ್ನ ಯುವರಾಜ ಪುನೀತ್ ರಾಜ್ಕುಮಾರ್ ದಿಢೀರ್ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ನಾಳೆ ಸಕಲ ಸರ್ಕಾರ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದರ ಬೆನ್ನಲ್ಲೇ ವಿದೇಶದಲ್ಲಿರುವ ಪುನೀತ್ ರಾಜ್ಕುಮಾರ್ ಮಗಳು ಧೃತಿ ಆಗಮನದಲ್ಲಿ ಸ್ವಲ್ಪ ತಡವಾಗಲಿದೆ ಎಂದು ಹೇಳಲಾಗುತ್ತಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಧೃತಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4ರಿಂದ 4:30ರೊಳಗೆ ಬೆಂಗಳೂರಿಗೆ ಆಗಮಿಸಬೇಕಾಗಿತ್ತು. ಆದರೆ, ಇದೀಗ ಅವರು ಸುಮಾರು 5-6 ಗಂಟೆಗಳ ಕಾಲ ತಡವಾಗಿ ಆಗಮಿಸುವ ಸಾಧ್ಯತೆ ಇರುವ ಕಾರಣ ರಾತ್ರಿ 11ರ ಬಳಿಕ ಬೆಂಗಳೂರಿಗೆ ಬರಲಿದ್ದಾರೆ. ಹೀಗಾಗಿ ಭಾನುವಾರ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.