ನವದೆಹಲಿ:ರೈತರ ಆಂದೋಲನ ಕುರಿತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಕಾಂಗ್ರೆಸ್ ಪಕ್ಷದ ಒಂದು ಭಾಗದ ನಾಯಕರೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮರೀಂದರ್ ಸಿಂಗ್ ತಮ್ಮ ಸಲಹೆಗಳನ್ನು ನೀಡುವ ನಿರೀಕ್ಷೆಯಿದೆ.
ಕೇಂದ್ರವು ಇಂದು ಪ್ರತಿಭಟನಾ ನಿರತ ರೈತರೊಂದಿಗೆ ಸಭೆ ನಡೆಸಲು ನಿರ್ಧರಿಸಿದೆ. ಈ ಸಭೆಗೂ ಮೊದಲು ಗೃಹ ಸಚಿವ ಅಮಿತ್ ಶಾ ಬೆಳಿಗ್ಗೆ ಅಮರೀಂದರ್ ಸಿಂಗ್ ಅವರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಕಾನೂನುಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದ್ದಾರೆ.