ಅಮೃತಸರ(ಪಂಜಾಬ್): ಕಳೆದ ಕೆಲ ತಿಂಗಳಿಂದ ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ವಿರುದ್ಧ ಬಹಿರಂಗವಾಗಿ ಶಾಸಕ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡ್ತಿದ್ದಾರೆ. ಮುಂದಿನ ವರ್ಷ ಪಂಜಾಬ್ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಇದು ಕಾಂಗ್ರೆಸ್ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದ ಸಮಿತಿ ಮಧ್ಯಪ್ರವೇಶ ಮಾಡಿದೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದ ಎಐಸಿಸಿಯ ಮೂವರು ಸದಸ್ಯರ ಸಮಿತಿ ಭೇಟಿ ಮಾಡಿದ್ದು, ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಮಲ್ಲಿಕಾರ್ಜುನ್ ಖರ್ಗೆ, ಎಲ್ಲವೂ ಸರಿಯಾಗಲಿದ್ದು, ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲೇ ನಾವು ಹೋರಾಡಲಿದ್ದೇವೆ ಎಂದಿದ್ದಾರೆ. ಪಕ್ಷದಲ್ಲಿ ಎಲ್ಲರೂ ಒಂದೇ ಎಂದಿರುವ ಖರ್ಗೆ, ಪಂಜಾಬ್ ಕಾಂಗ್ರೆಸ್ನಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಬಗೆಹರಿಸುವ ಕೆಲಸ ಮಾಡಿದ್ದಾರೆ.
ಇದನ್ನೂ ಓದಿರಿ: ಚುನಾವಣೆಗಾಗಿ ಪ್ರದರ್ಶನದ ಬೊಂಬೆ ನಾನಲ್ಲ: ಸಿಎಂ ವಿರುದ್ಧ ಸಿಧು ವಾಗ್ದಾಳಿ
ಕಳೆದ ಎರಡು ದಿನಗಳ ಹಿಂದೆ ಕ್ಯಾ. ಅಮರಿಂದರ್ ಸಿಂಗ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದ ಶಾಸಕ ನವಜೋತ್ ಸಿಂಗ್ ಸಿಧು, ಚುನಾವಣೆ ವೇಳೆ ಪ್ರಚಾರಕ್ಕೆ ಕರೆದೊಯ್ದು, ತದನಂತರ ಕಪಾಟಿನಲ್ಲಿಡಲು ನಾನು ಪ್ರದರ್ಶನದ ಬೊಂಬೆ ಅಲ್ಲ. ನೀವು ಏನು ಮಾಡುತ್ತಿದ್ದೀರಿ ಎಂದು ನೋಡುತ್ತ ಕುಳಿತುಕೊಳ್ಳುವುದು ನನ್ನ ಕೆಲಸವಲ್ಲ ಎಂದು ಹೇಳಿದ್ದರು.