ಕರ್ನಾಟಕ

karnataka

ETV Bharat / bharat

ಬಜರಂಗದಳ ಅವಹೇಳನ ಆರೋಪ: ಮಲ್ಲಿಕಾರ್ಜುನ್​ ಖರ್ಗೆಗೆ ಪಂಜಾಬ್​ ಕೋರ್ಟ್​ ಸಮನ್ಸ್​

ಬಜರಂಗದಳವನ್ನು ಭಯೋತ್ಪಾದನೆ ಆರೋಪ ಎದುರಿಸುತ್ತಿರುವ ಪಿಎಫ್​ಐಗೆ ಹೋಲಿಸಿದ್ದರ ಕುರಿತಾಗಿ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಪಂಜಾಬ್​ ಕೋರ್ಟ್​ ಸಮನ್ಸ್​​ ನೀಡಿದೆ.

By

Published : May 15, 2023, 12:33 PM IST

ಮಲ್ಲಿಕಾರ್ಜುನ್​ ಖರ್ಗೆಗೆ ಪಂಜಾಬ್​ ಕೋರ್ಟ್​ ಸಮನ್ಸ್​
ಮಲ್ಲಿಕಾರ್ಜುನ್​ ಖರ್ಗೆಗೆ ಪಂಜಾಬ್​ ಕೋರ್ಟ್​ ಸಮನ್ಸ್​

ನವದೆಹಲಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಇಂದು ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಬಜರಂಗದಳ ಕುರಿತಾದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ಸೂಚಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಹಿಂದು ಸಂಘಟನೆ ಬಜರಂಗದಳವನ್ನು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿ ನಿಷೇಧಕ್ಕೆ ಒಳಗಾಗಿರುವ ಪಾಪ್ಯುಲರ್​ ಫ್ರಂಟ್​ ಆಫ್​​ ಇಂಡಿಯಾ(ಪಿಎಫ್​ಐ)ಗೆ ಹೋಲಿಕೆ ಮಾಡಲಾಗಿದೆ. ಇದರ ವಿರುದ್ಧ ಹಿಂದೂ ಸುರಕ್ಷಾ ಪರಿಷತ್‌ ಮಾನನಷ್ಟ ಕೇಸ್​ ದಾಖಲಿಸಿದೆ.

ಚುನಾವಣೆ ಪ್ರಣಾಳಿಕೆ ಬಿಡುಗಡೆಯ ವೇಳೆ ಮಲ್ಲಿಕಾರ್ಜುನ್​ ಖರ್ಗೆ ಅವರು, ದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ತೊಡಗಿಸಿಕೊಂಡು ಈಗಾಗಲೇ ನಿಷೇಧಕ್ಕೆ ಒಳಗಾಗಿರುವ ಪಿಎಫ್​​ಐ ಅನ್ನು ಹಿಂದು ಸಂಘಟನೆಗೆ ಹೋಲಿಕೆ ಮಾಡಿದ್ದರು. ಇದು ಹಿಂದು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಖರ್ಗೆ ಅವರ ಈ ಹೇಳಿಕೆಯ ವಿರುದ್ಧ ಹಿಂದೂ ಸುರಕ್ಷಾ ಪರಿಷತ್‌ನ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ, ಕಾಂಗ್ರೆಸ್ ಅಧ್ಯಕ್ಷರಿಗೆ ಸ್ಪಷ್ಟನೆ ನೀಡುವಂತೆ ಈಗ ಸಮನ್ಸ್ ನೀಡಿದೆ.

ವಿಎಚ್​​ಪಿಯಿಂದಲೂ ಲೀಗಲ್​ ನೋಟಿಸ್​:ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ 100 ಕೋಟಿ ರೂ.ಗೂ ಹೆಚ್ಚು ಪರಿಹಾರ ನೀಡುವಂತೆ ಆಗ್ರಹಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಶ್ವ ಹಿಂದೂ ಪರಿಷತ್ ಲೀಗಲ್ ನೋಟಿಸ್ ಜಾರಿ ಮಾಡಿತ್ತು. ವಿಎಚ್‌ಪಿಯ ಚಂಡೀಗಢ ಘಟಕ ಮತ್ತು ಅದರ ಯುವ ಘಟಕ ಬಜರಂಗದಳ ಮೇ 4 ರಂದೇ ಈ ನೋಟಿಸ್​ ನೀಡಿದೆ. ಅಲ್ಲದೇ, 14 ದಿನಗಳಲ್ಲಿ ಪರಿಹಾರವನ್ನು ನೀಡಬೇಕು ಎಂದೂ ಅದರಲ್ಲಿ ಒತ್ತಾಯಿಸಿತ್ತು. ಈವರೆಗೆ ಕಾಂಗ್ರೆಸ್​ ಉತ್ತರಿಸಿಲ್ಲ.

ಪ್ರಣಾಳಿಕೆಯಲ್ಲಿ ಏನಿದೆ?:ಕಾಂಗ್ರೆಸ್​ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳ ಜೊತೆಗೆ, ಪ್ರಮುಖವಾಗಿ ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಂತಹ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ. ಜಾತಿ ಮತ್ತು ಧರ್ಮ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್​ ಬದ್ಧ ಎಂದಿದೆ. ಅಲ್ಲದೇ. ಒಂದು ಹೆಜ್ಜೆ ಮುಂದೆ ಹೋಗಿ ಸಮಾಜದ ಶಾಂತಿಯನ್ನು ಕದಡುವ ಸಂಘಟನೆಗಳನ್ನು ನಿಷೇಧಿಸಲಾಗುವುದು ಎಂದು ಭರವಸೆ ನೀಡಿದೆ.

ಕಾಂಗ್ರೆಸ್​ಗೆ ಸವಾಲು:ಪ್ರಣಾಳಿಕೆಯಲ್ಲಿ ವಿಶ್ವ ಹಿಂದೂ ಪರಿಷತ್​ ಸಹವರ್ತಿ ಸಂಸ್ಥೆಯಾದ ಬಜರಂಗದಳವನ್ನು ನಿಷೇಧಿಸುವುದಾಗಿ ಘೋಷಿಸಿದ್ದೀರಿ. ಅಲ್ಲದೇ, ಪ್ರಮುಖವಾಗಿ ಸಂಘಟನೆಯನ್ನು ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್​ಐಗೆ ಸಮಾನವಾಗಿ ಹೋಲಿಸಿದ್ದೀರಿ. ಪಿಎಫ್​ಐನಂತೆ ಬಜರಂಗದಳ ಯಾವ ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದೆ ಎಂಬುದನ್ನು ಸಾಬೀತು ಪಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್​ ಕಾಂಗ್ರೆಸ್​ಗೆ ಸವಾಲು ಹಾಕಿದೆ.

ಇದನ್ನೂ ಓದಿ:ಹನುಮಂತನನ್ನು ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ ಸಮಾನಾರ್ಥಕವಾಗಿ ಹೋಲಿಸುವುದು ಅವಮಾನ: ಸುರ್ಜೇವಾಲ

ABOUT THE AUTHOR

...view details