ಚಂಡೀಗಢ: ರಾಜ್ಯದಾದ್ಯಂತ ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಮುಂಬರುವ ಹಬ್ಬದ ಸೀಸನ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಸ್ತುತ ಇರುವ ಕೋವಿಡ್ ನಿರ್ಬಂಧಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದ್ದಾರೆ. ಜೊತೆಗೆ 300 ಜನಕ್ಕಿಂತ ಹೆಚ್ಚು ಗುಂಪು ಸೇರಿದಂತೆ ಸೂಚನೆ ನೀಡಿದ್ದಾರೆ.
ಪಂಜಾಬ್ : ಕೊರೊನಾ ನಿಯಂತ್ರಣಕ್ಕೆ ಸೆ. 30 ರವರೆಗೆ ನಿರ್ಬಂಧ ವಿಸ್ತರಣೆ
ಮುಂಬರುವ ಹಬ್ಬದ ಸೀಸನ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಸ್ತುತ ಇರುವ ಕೋವಿಡ್ ನಿರ್ಬಂಧಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಸಿಎಂ ಆದೇಶ ನೀಡಿದ್ದಾರೆ.
ಪಂಜಾಬ್ : ಕೊರೊನಾ ನಿಯಂತ್ರಣಕ್ಕೆ ಸೆ. 30 ರವರೆಗೆ ನಿರ್ಬಂಧ ವಿಸ್ತರಣೆ
ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಬ್ಬ-ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ರಾಜಕೀಯ ಪಕ್ಷಗಳು ಸೇರಿದಂತೆ ಸಂಘಟಕರು, ಆಹಾರ ಮಳಿಗೆಗಳಲ್ಲಿ ಭಾಗವಹಿಸುವ ಸಿಬ್ಬಂದಿ ಕನಿಷ್ಠ ಒಂದು ಡೋಸ್ ಆದರೂ ಪಡೆದಿರುವುದು ಕಡ್ಡಾಯವಾಗಿದೆ.
ಪರೀಕ್ಷಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಸಂಭವನೀಯ ಮೂರನೇ ತರಂಗವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಮಾಡಲು ಸರ್ಕಾರ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.