ಬಟಿಂಡಾ (ಪಂಜಾಬ್):ರಾಜ್ಯ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಅವರಿಗೆ ಘೇರಾವ್ ಹಾಕಲು ಮುಂದಾಗಿದ್ದ ಗುತ್ತಿಗೆ ನೌಕರರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಪಂಜಾಬ್ನ ವಿವಿಧೆಡೆ ಗುತ್ತಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪಂಜಾಬ್ ವಿತ್ತ ಸಚಿವರಿಗೆ ಘೇರಾವ್ ಹಾಕಲು ಮುಂದಾಗಿದ್ದ ಗುತ್ತಿಗೆ ನೌಕರರನ್ನು ತೆರವುಗೊಳಿಸಿದ ಪೊಲೀಸರು - ಪಂಜಾಬ್ನಲ್ಲಿ ಗುತ್ತಿಗೆ ನೌಕರರ ಪ್ರತಿಭಟನೆ
ಕೆಲ ದಿನಗಳಿಂದಲೂ ಪಂಜಾಬ್ನ ವಿವಿಧ ಭಾಗದಲ್ಲಿ ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್ ಸರ್ಕಾರದ ವಿರುದ್ಧ ನೌಕರರು ಆಕ್ರೋಶ ಹೊರಹಾಕುತ್ತಿದ್ದಾರೆ.
ಗುತ್ತಿಗೆ ನೌಕರನ್ನು ತೆರವುಗೊಳಿಸಿದ ಪೊಲೀಸರು
ಇದೀಗ ರಾಜ್ಯ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಅವರು ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಗೆ ಆಗಮಿಸಿದ್ದ ವೇಳೆ ನೌಕರರು ಘೇರಾವ್ ಹಾಕಲು ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾ ನಿರತ ನೌಕರರನ್ನು ತೆರವುಗೊಳಿಸಿದರು. ಜೊತೆಗೆ ಕೆಲವರನ್ನು ವಶಕ್ಕೆ ಪಡೆದರು. ಈ ವೇಳೆ ಪಂಜಾಬ್ ಸರ್ಕಾರದ ವಿರುದ್ಧ ನೌಕರರು ಘೋಷಣೆ ಕೂಗಿದ್ದು, ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಕೇಂದ್ರದೊಂದಿಗೆ ಮಾತುಕತೆ.. ಮಾಹಿತಿ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ