ಪುರಿ :ಭಾರತದ ಪೂರ್ವ ಕರಾವಳಿಯ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯದಲ್ಲಿ ಇಂದಿನಿಂದ ಮತ್ತೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಇಂದಿನಿಂದ ಪುರಿ ಜಗನ್ನಾಥ ದೇವಾಲಯದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ - Puri Jagannath Temple reopens
2020ರ ಡಿಸೆಂಬರ್ 23ರಿಂದ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ. ಆದರೆ, ದೇವಾಲಯದ ಆವರಣದಲ್ಲಿ ‘ಮಹಾಪ್ರಸಾದ’ ನಡೆಸಲು ಯಾರಿಗೂ ಅವಕಾಶ ನೀಡಲಾಗ್ತಿಲ್ಲ..

ಇಂದಿನಿಂದ ಪುರಿ ಜಗನ್ನಾಥ ದೇವಾಲಯದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ
ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದ್ದು, ನೆಗೆಟಿವ್ ವರದಿ ಬಂದವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಪ್ರತಿದಿನ ಸುಮಾರು 15,000-17,000 ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ದೇವಾಲಯದ ಆವರಣದಲ್ಲಿ ‘ಮಹಾಪ್ರಸಾದ’ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪುರಿ ಜಿಲ್ಲಾಧಿಕಾರಿ ಬಲ್ವಂತ್ ಸಿಂಗ್ ಹೇಳಿದ್ದಾರೆ. 2020ರ ಡಿಸೆಂಬರ್ 23ರಿಂದ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.