ಡೆಹ್ರಾಡೂನ್(ಉತ್ತರಾಖಂಡ): ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಆದರೆ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೋಲು ಕಂಡಿದ್ದರು. ಇಂದು ರಾಜ್ಯಪಾಲ ಗುರ್ಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಪುಷ್ಕರ್ ಸಿಂಗ್ ಧಾಮಿ ಟ್ವೀಟ್ ಮಾಡಿದ್ದು, ಉತ್ತರಾಖಂಡದಲ್ಲಿ ನಾವು ಪ್ರಚಂಡ ಬಹುಮತ ಪಡೆದುಕೊಂಡಿದ್ದೇವೆ. ಆದರೆ, ಈಗಿನ ಸರ್ಕಾರದ ಅಧಿಕಾರದ ಅವಧಿ ಮುಕ್ತಾಯಗೊಂಡಿದ್ದು, ನನ್ನ ಸಚಿವ ಸಂಪುಟ ಮತ್ತು ನಾನು ಇಂದು ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರು ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ಹಂಗಾಮಿ ಸ್ಥಾನದಲ್ಲಿ ಮುಂದುವರೆಯುವಂತೆ ಧಾಮಿಗೆ ಮನವಿ ಮಾಡಿದ್ದಾರೆ.