ಮುಂಬೈ (ಮಹಾರಾಷ್ಟ್ರ):ಚಲಿಸುತ್ತಿದ್ದ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಮುಂಬೈ ರೈಲ್ವೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಲಖನೌ ಮತ್ತು ಮುಂಬೈ ನಡುವೆ ಸಂಚರಿಸುವ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರ ಬಳಿ ಇದ್ದ ಹಣ, ಮೊಬೈಲ್ ಮತ್ತು ಆಭರಣಗಳನ್ನು ಖದೀಮರು ದರೋಡೆ ಮಾಡಿದ್ದರು. ಇದೇ ವೇಳೆ ರೈಲಿನಲ್ಲಿದ್ದ 20 ವರ್ಷದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು.
ಇದನ್ನೂ ಓದಿ: ಚಲಿಸುತ್ತಿದ್ದ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ದರೋಡೆ.. ಯುವತಿ ಮೇಲೆ ಗ್ಯಾಂಗ್ರೇಪ್ ಆರೋಪ
ಘಟನೆ ಸಂಬಂಧ ಕಲ್ಯಾಣ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇಂದು ಮತ್ತಿಬ್ಬರನ್ನು ಅರೆಸ್ಟ್ ಮಾಡಿ, ತನಿಖೆ ಮುಂದುವರೆಸಿದ್ದಾರೆ.
ಶನಿವಾರ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಂಬೈ ರೈಲ್ವೆ ಪೊಲೀಸ್ ಆಯುಕ್ತ ಕ್ವೈಸರ್ ಖಾಲಿದ್ ತಿಳಿಸಿದ್ದಾರೆ.