ಕರ್ನಾಟಕ

karnataka

ETV Bharat / bharat

ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೊಲೀಸರ ಭೇಟಿ ಮಾಡಿದ ಅಮಿತ್ ಶಾ - ಗೃಹ ಸಚಿವ ಅಮಿತ್

ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯ ಬಳಿ ರೈತರ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಸುಮಾರು 394 ಪೊಲೀಸರು ಗಾಯಗೊಂಡಿದ್ದರು. ಇದೀಗ ಗಾಯಾಳು ಪೊಲೀಸರನ್ನು ಅಮಿತ್ ಶಾ ಭೇಟಿಯಾಗಿದ್ದಾರೆ.

Union Home Minister Amit shah
ಗೃಹ ಸಚಿವ ಅಮಿತ್ ಶಾ

By

Published : Jan 28, 2021, 5:01 PM IST

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ನಡೆದಿದ್ದ ಹಿಂಸಾಚಾರದಲ್ಲಿ ಗಾಯಾಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ.

ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ದೆಹಲಿಯ ಶುಶೃತಾ ಹಾಗೂ ತಿರತ್ ರಾಮ್ ಶಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ಗಾಯಗೊಂಡ ಪೊಲೀಸರ ಭೇಟಿ ಮಾಡಿದ ಗೃಹ ಸಚಿವ ಅಮಿತ್ ಶಾ

ಪೊಲೀಸರ ಭೇಟಿ ಬಳಿಕ ಟ್ವೀಟ್ ಮಾಡಿರುವ ಅಮಿತ್ ಶಾ, ಅವರ ಧೈರ್ಯ ಮತ್ತು ದಕ್ಷತೆ ನೋಡಿದರೆ ನನಗೆ ಹೆಮ್ಮೆಯಾಗುತ್ತದೆ ಎಂದಿದ್ದಾರೆ.

ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯ ಬಳಿ ರೈತರ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಸುಮಾರು 394 ಪೊಲೀಸರು ಗಾಯಗೊಂಡಿದ್ದರು. ಇವರಲ್ಲಿ ಕೆಲವರು ಐಸಿಯುನಲ್ಲಿಯೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಘಟನೆ ಸಂಬಂಧ ಪೊಲೀಸರು 19 ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ:ರೈತರೊಂದಿಗೆ ನಾವಿದ್ದೇವೆ, ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿ ಕಾರಣ: ಮಮತಾ ಬ್ಯಾನರ್ಜಿ

ABOUT THE AUTHOR

...view details