ನಾಗ್ಪುರ:ನಾಗ್ಪುರ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 6 ಇಂಟರ್ ಡಾಕ್ಟರ್ಗಳ ಮೇಲೆ ರ್ಯಾಗಿಂಗ್ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ರ್ಯಾಗಿಂಗ್ ಸಮಿತಿ ಆದೇಶದ ಅನ್ವಯ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.
ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಜೂನಿಯರ್ಗೆ ಹೊಡೆದು, ಮಾನಸಿಕ ದೌರ್ಜನ್ಯ ನಡೆಸುತ್ತಿರುವುದು ಕಂಡು ಬಂದಿದೆ. ರ್ಯಾಗಿಂಗ್ ನಡೆಸಿದ ಹಿರಿಯ ವಿದ್ಯಾರ್ಥಿಗಳು ಎಂಬಿಬಿಎಸ್ ಪದವಿ ಮುಗಿಸಿದ್ದು, ಇಂಟರ್ನ್ಶಿಪ್ ಮಾಡುತ್ತಿದ್ದರು.