ಡುಂಗರಪುರ(ರಾಜಸ್ಥಾನ): ಬುಧವಾರ ವೈದ್ಯಕೀಯ ಕಾಲೇಜಿನಲ್ಲಿ, ಮೂರನೇ ವರ್ಷದ ವಿದ್ಯಾರ್ಥಿಗಳು ರ‍್ಯಾಗಿಂಗ್ ಹೆಸರಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಥಳಿಸಿರುವ ಘಟನೆ ನಡೆದಿದೆ. ಈ ಸಮಯದಲ್ಲಿ ಹಾಜರಿದ್ದ ಇತರ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡುವ ಮತ್ತು ಥಳಿಸುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಪ್ರಸ್ತುತ ಮೊದಲ ಮತ್ತು ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳ ಪರೀಕ್ಷೆಗಳು ಡುಂಗರಪುರ ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿವೆ. ಬುಧವಾರ ಮಧ್ಯಾಹ್ನ ಪರೀಕ್ಷೆಯ ನಂತರ, ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನ ಹೊರಗಿನ ಬೆಟ್ಟದ ಮೇಲೆ ನಿಂತಿದ್ದರು. ಈ ಸಮಯದಲ್ಲಿ ಮೂರನೇ ವರ್ಷದ ಕೆಲವು ವಿದ್ಯಾರ್ಥಿಗಳು ಅಲ್ಲಿಗೆ ಬಂದು ರ‍್ಯಾಗಿಂಗ್ ಮಾಡಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ.