ನವದೆಹಲಿ:ಕಾಂಗ್ರೆಸ್ನ ಕರ್ನಾಟಕ ಘಟಕದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಭಿನ್ನಾಭಿಪ್ರಾಯಗಳನ್ನು ನಿವಾರಿಸಿ, ಪಕ್ಷಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ರಾಹುಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೆ "ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಪಕ್ಷವನ್ನು ಕಟ್ಟಲು ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.