ನವ ದೆಹಲಿ: ಜನ್ -ಧನ್ ಖಾತೆಗಳಲ್ಲಿನ ಹಣ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನ್ ಧನ್ ಖಾತೆದಾರರಿಂದ ಒಟ್ಟು 164 ಕೋಟಿ ರೂ. ಶುಲ್ಕವನ್ನು ವಿಧಿಸುವಾಗ ಜನ್ ಧನ್ ಖಾತೆಗಳಿಗೆ ಸಂಬಂಧಿಸಿದ ಷರತ್ತುಗಳನ್ನು ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.
2017 ಮತ್ತು ಸೆಪ್ಟೆಂಬರ್ 2020 ರ ನಡುವೆ, ಯುಪಿಐ (UPI) ಮತ್ತು ರುಪೇ ಕಾರ್ಡ್ ಮೂಲಕ ವಹಿವಾಟುಗಳಿಗಾಗಿ ಬ್ಯಾಂಕ್ ಜನ್ ಧನ್ ಖಾತೆದಾರರಿಂದ ಒಟ್ಟು 254 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಈ ಅವಧಿಯಲ್ಲಿ ಬ್ಯಾಂಕ್ ಪ್ರತಿ ಖಾತೆದಾರರಿಂದ 17.70 ರೂಪಾಯಿಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ, ರಫೇಲ್ ಜೆಟ್ ಸ್ವಾಧೀನಪಡಿಸಿಕೊಳ್ಳುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಇದನ್ನೂ ಓದಿ:ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ-2019 ಅಳವಡಿಕೆ ವಿಚಾರ; ಜಂಟಿ ಸಂಸದೀಯ ಸಮಿತಿ ಸಭೆ ಆರಂಭ