ಕರ್ನಾಟಕ

karnataka

ETV Bharat / bharat

ಮದುವೆ ಬಗ್ಗೆ ಮಹಿಳೆಯೊಬ್ಬರ ಮಾತುಗಳಿಂದ ರಾಹುಲ್ ಗಾಂಧಿ ಖುಷ್: ಜೈರಾಮ್ ರಮೇಶ್ ಟ್ವೀಟ್ - ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್

ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ರಾಹುಲ್ ಗಾಂಧಿ ಅವರ ಫೋಟೋ ವೈರಲ್ ಆಗುತ್ತಿದೆ. ಅದರಲ್ಲಿ ಅವರು ನಗುತ್ತಿರುವುದನ್ನು ಕಾಣಬಹುದು. ಈ ನಗುವಿನ ಹಿಂದಿನ ಕಾರಣವೂ ಕುತೂಹಲಕಾರಿಯಾಗಿದೆ. ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Jairam Ramesh shares pics from Tamil Nadu
ರೇಗಾ ಕೂಲಿ ಕಾರ್ಮಿಕರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದ

By

Published : Sep 11, 2022, 2:16 PM IST

ಚೆನ್ನೈ(ತಮಿಳುನಾಡು):3ನೇ ದಿನದಂದು ತಮಿಳುನಾಡಿನ ಮಹಿಳಾ ನರೇಗಾ ಕೂಲಿ ಕಾರ್ಮಿಕರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸುತ್ತಿರುವ ಚಿತ್ರಗಳನ್ನು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಶನಿವಾರ ಹಂಚಿಕೊಂಡಿದ್ದಾರೆ. ಒಬ್ಬ ಮಹಿಳೆ ತನ್ನ ಮದುವೆಯ ಬಗ್ಗೆ ಮಾತನಾಡುತ್ತಿದ್ದಾಗ ರಾಹುಲ್ ಸಂತೋಷಗೊಂಡವರಂತೆ ಕಾಣುತ್ತಿದ್ದರು ಎಂದು ಅವರು ಹೇಳಿದರು.

ಈ ಕುರಿತು ಜೈರಾಂ ರಮೇಶ್ ಟ್ವಿಟರ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದು, 'ಭಾರತ್ ಜೋಡೋ ಯಾತ್ರೆಯ 3 ನೇ ದಿನದ ಉಲ್ಲಾಸದ ಕ್ಷಣ' ಎಂದು ಶೀರ್ಷಿಕೆ ನೀಡಿದ್ದಾರೆ. ರಾಹುಲ್ ಗಾಂಧಿಯವರು ತಮಿಳುನಾಡನ್ನು ಪ್ರೀತಿಸುತ್ತಿದ್ದಾರೆಂದು ನನಗೆ ತಿಳಿದಿದೆ ಮತ್ತು ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಹೆಚ್ಚು ಸಂತೋಷದಿಂದಿರುವಂತೆ ಕಾಣುತ್ತಾರೆ ಮತ್ತು ಫೋಟೊ ಅದನ್ನು ತೋರಿಸುತ್ತದೆ ಎಂದು ಜೈರಾಂ ರಮೇಶ್ ಹೇಳಿದ್ದಾರೆ. ಇಬ್ಬರು ನಾಯಕರು ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಯಾತ್ರೆ ತಮಿಳುನಾಡಿನ ಕನ್ಯಾಕುಮಾರಿಯಿಂದ 12 ರಾಜ್ಯಗಳಲ್ಲಿ ಸಂಚರಿಸಿ ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ:4ನೇ ದಿನಕ್ಕೆ ಕಾಲಿಟ್ಟ 'ಭಾರತ್ ಜೋಡೋ ಯಾತ್ರೆ'.. ಇಂದು ಕೇರಳಕ್ಕೆ ಪ್ರವೇಶ

ABOUT THE AUTHOR

...view details