ನವದೆಹಲಿ:ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದರ ಉದ್ಘಾಟನೆ ಮಾಡಿದ್ದಾರೆ.
ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರು ಮರುನಾಮಕರಣ ಮಾಡುತ್ತಿದ್ದಂತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, 'ಹಮ್ ದೋ ಹಮಾರಾ ದೋ'(ನಾವಿಬ್ಬರು, ನಮಗಿಬ್ಬರು) ಎಂಬ ಸತ್ಯ ಬಹಿರಂಗಪಡಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಮೊಟೆರಾ ಸ್ಟೇಡಿಯಂ ಹೆಸರು ಬದಲಿಸಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ನಾಮಕರಣ
ಅಹಮದಾಬಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿದ್ದಕ್ಕಾಗಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣ, ಅದಾನಿ ಎಂಡ್, ರಿಲಯನ್ಸ್ ಎಂಡ್ ಜತೆಗೆ ಜಯ್ ಶಾ ಅಧ್ಯಕ್ಷತೆ ಎಂದು ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದ ಉದ್ಘಾಟನೆ ಬಳಿಕ ಟ್ವೀಟ್ ಮಾಡಿದ್ದಾರೆ. ಇದರ ಜತೆಗೆ ನಾವಿಬ್ಬರು, ನಮಗಿಬ್ಬರು ಎಂದು ತಮ್ಮ ಹಳೆಯ ಟೀಕೆಯ ಹ್ಯಾಶ್ಟ್ಯಾಗ್ ಬಳಕೆ ಮಾಡಿದ್ದಾರೆ.
ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿ ಸರ್ದಾರ್ ಪಟೇಲ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಸೇರಿ ಅನೇಕ ಪಕ್ಷಗಳು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಅಹಮದಾಬಾದ್ ಸ್ಫೋರ್ಟ್ಸ್ ಕಾಂಪ್ಲೆಕ್ಸ್ ಹೆಸರಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ.