ನಾಂದೇಡ್(ಮಹಾರಾಷ್ಟ್ರ): ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ದಕ್ಷಿಣ ರಾಜ್ಯಗಳಲ್ಲಿ ಪೂರ್ಣಗೊಂಡಿದ್ದು, ಇಂದು ಮಹಾರಾಷ್ಟ್ರ ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅದ್ಧೂರಿ ಸ್ವಾಗತ ಕೋರಲು ಸಜ್ಜಾಗಿದೆ.
ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಸಾಗಿದ್ದು, ಇದೀಗ ತೆಲಂಗಾಣದಿಂದ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೆಗ್ಲೂರ್‌ನಲ್ಲಿರುವ ಮದ್ನೂರ್ ನಾಕಾವನ್ನು ಸಂಜೆ ತಲುಪಲಿದೆ.
ಇದನ್ನೂ ಓದಿ:ಭಾರತ್ ಜೋಡೋ ಯಾತ್ರೆ: ಮಕ್ಕಳೊಂದಿಗೆ ರಾಹುಲ್ ಗಾಂಧಿ ರನ್ನಿಂಗ್ ರೇಸ್
ಭಾರತ್ ಜೋಡೋ ಯಾತ್ರೆಯು ಮುಂದಿನ 14 ದಿನಗಳ ಪ್ರವಾಸದಲ್ಲಿ ಮಹಾರಾಷ್ಟ್ರದ 15 ವಿಧಾನಸಭಾ ಕ್ಷೇತ್ರಗಳು ಮತ್ತು ಆರು ಸಂಸದೀಯ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಮಧ್ಯಪ್ರದೇಶವನ್ನು ಪ್ರವೇಶಿಸುವ ಮೊದಲು 'ಮಹಾ' ರಾಜ್ಯದ ಐದು ಜಿಲ್ಲೆಗಳಲ್ಲಿ 381 ಕಿಮೀ ದೂರ ಕ್ರಮಿಸಬೇಕಿದೆ. ನವೆಂಬರ್ 10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ‍್ಯಾಲಿಗಳನ್ನು ಉದ್ದೇಶಿಸಿ ರಾಹುಲ್ ಮಾತನಾಡುವರು.