ನವದೆಹಲಿ: ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿ ಅವರ ಮಾನನಷ್ಟ ಮೊಕದ್ದಮೆಯ ಬಗ್ಗೆ ನಾಳೆ ಅಂದರೆ ಏಪ್ರಿಲ್ 29 ರಂದು ವಿಚಾರಣೆ ನಡೆಸಲಿದೆ. ರಾಹುಲ್ ಗಾಂಧಿ ಅವರ ಅರ್ಜಿಯನ್ನು ಸೂರತ್ ಸೆಷನ್ಸ್ ಕೋರ್ಟ್ ತಿರಸ್ಕರಿಸಿದ ನಂತರ, ಅವರು ಈ ಆದೇಶವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತಮ್ಮ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೂರತ್ ಸೆಷನ್ಸ್ ಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ಸೂರತ್‌ನ ಸೆಷನ್ಸ್ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನಲ್ಲಿ ಪರಿಷ್ಕರಣೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಮೊದಲು ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಇದರಿಂದಾಗಿ ನ್ಯಾಯಮೂರ್ತಿ ಹೇಮಂತ್ ಪ್ರಚಾರಕ್ ಈಗ ಈ ಅರ್ಜಿಯನ್ನು ಆಲಿಸಲಿದ್ದಾರೆ. ಏಪ್ರಿಲ್ 29 ರಂದು ವಿಚಾರಣೆ ನಡೆಯಲಿದೆ. ಇದೇ ಮಾರ್ಚ್ 23 ರಂದು ಸೂರತ್ ನ್ಯಾಯಾಲಯವು 2019 ರಲ್ಲಿ ಮೋದಿ ಉಪನಾಮದ ಬಗ್ಗೆ ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳ ಪ್ರಕರಣದಲ್ಲಿ ತೀರ್ಪು ನೀಡಿತು. ನ್ಯಾಯಾಲಯವು ಸೆಕ್ಷನ್ 504 ರ ಅಡಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಆದರೆ ಈ ಆದೇಶ ಜಾರಿಗೆ ನ್ಯಾಯಾಲಯ ಕೆಲ ದಿನಗಳ ಕಾಲಾವಕಾಶ ನೀಡಿದೆ. ಜೊತೆಗೆ ರಾಹುಲ್ ಅವರಿಗೆ ತಕ್ಷಣದ ಜಾಮೀನು ಕೂಡ ನೀಡಲಾಗಿದೆ. ರಾಹುಲ್ ಗಾಂಧಿ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಈ ಆದೇಶವನ್ನು ಪ್ರಶ್ನಿಸಿ ಶಿಕ್ಷೆಗೆ ತಡೆ ಕೋರಿದ್ದರು. ಆದರೆ ಸೂರತ್ ನ್ಯಾಯಾಲಯವು ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ ಮತ್ತು ರಾಹುಲ್ ಗಾಂಧಿ ಅವರ ಅರ್ಜಿಯನ್ನು ವಜಾಗೊಳಿಸಿದೆ.