ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ಬುಧವಾರ ಕೋವಿಡ್ ಮೊದಲ ಲಸಿಕೆ ಪಡೆದಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮಾಜಿ ಅಧ್ಯಕ್ಷರೂ ಆಗಿರುವ ರಾಹುಲ್ ಗಾಂಧಿ ಜುಲೈ 28 ರಂದು ತಮ್ಮ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ. ಆದ್ದರಿಂದ ಜುಲೈ 29 ಮುಂಗಾರು ಸಂಸತ್ ಅಧಿವೇಶನಕ್ಕೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.
ಏಪ್ರಿಲ್ 20 ರಂದು ರಾಹುಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಲಸಿಕೆ ಪಡೆಯುವುದು ವಿಳಂಬವಾಯಿತು. ಸೋಂಕು ಕಾಣಿಸಿಕೊಂಡಿದ್ದ ಬಗ್ಗೆ ಟ್ವೀಟ್ ಮಾಡಿದ್ದ ಅವರು, ರೋಗದ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡ ನಂತರ, ಕೋವಿಡ್ ಪಾಸಿವಿಟ್ ವರದಿ ಬಂದಿತ್ತು. ತಮ್ಮ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿ ಮತ್ತು ಸುರಕ್ಷಿತವಾಗಿರಿ ಎಂದು ಹೇಳಿದ್ದರು. ಜೂನ್ 17 ರಂದು, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೋವಿಡ್ ಲಸಿಕೆಯ ಎರಡು ಡೋಸ್‌ಗಳನ್ನು ನಿಗದಿತ ಅವಧಿಯಲ್ಲಿ ತೆಗೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.