ಕರ್ನಾಟಕ

karnataka

ETV Bharat / bharat

ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್​ ಗಾಂಧಿ: ಅಮ್ಮ ಸೋನಿಯಾ ಮನೆಗೆ ವಸ್ತುಗಳು ಸ್ಥಳಾಂತರ - ರಾಹುಲ್​ ಗಾಂಧಿಗೆ ಜೈಲು ಶಿಕ್ಷೆ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ತಮ್ಮ ಸರ್ಕಾರಿ ನಿವಾಸವನ್ನು ಖಾಲಿ ಮಾಡುತ್ತಿದ್ದು, ತಾಯಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ವಸ್ತುಗಳನ್ನು ಸ್ಥಳಾಂತರಿಸಿದ್ದಾರೆ.

Rahul Gandhi is vacating his 12 Tughlak Lane bungalow in Delhi
ರಾಹುಲ್​ ಗಾಂಧಿ ಸರ್ಕಾರಿ ನಿವಾಸ ಖಾಲಿ

By

Published : Apr 14, 2023, 6:19 PM IST

Updated : Apr 14, 2023, 7:04 PM IST

ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್​ ಗಾಂಧಿ

ನವದೆಹಲಿ: ಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತಮ್ಮ ಸರ್ಕಾರಿ ನಿವಾಸವನ್ನು ಇದೀಗ ಖಾಲಿ ಮಾಡುತ್ತಿದ್ದಾರೆ. ತಾಯಿ ಸೋನಿಯಾ ಗಾಂಧಿ ನಿವಾಸಕ್ಕೆ ವಸ್ತುಗಳನ್ನು ಸಾಗಿಸಲಾಗುತ್ತಿದೆ. ಮೋದಿ ಉಪನಾಮ ಕುರಿತ ವಿವಾದಿತ ಹೇಳಿಕೆ ಬಗ್ಗೆ ದಾಖಲಾದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರನ್ನು ಗುಜರಾತ್​ನ ಸೂರತ್ ನ್ಯಾಯಾಲಯವು ದೋಷಿ ಎಂದು ಪ್ರಕಟಿಸಿ, ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸದ್ಯ ಜಾಮೀನು ಪಡೆದಿದ್ದಾರೆ. ಆದರೆ, ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ತಾವು ಪ್ರತಿನಿಧಿಸುತ್ತಿದ್ದ ಕೇರಳದ ವಯನಾಡು ಲೋಕಸಭಾ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿದೆ.

ಇದನ್ನೂ ಓದಿ:ದೇಶದಲ್ಲಿ 'ಕೈ' ಬಲವರ್ಧನೆಗೆ ಖರ್ಗೆ ರಣತಂತ್ರ: ಪಕ್ಷ, ಪ್ರತಿಪಕ್ಷಗಳ ಒಗ್ಗಟ್ಟಿಗೆ ಏಕಕಾಲದಲ್ಲಿ ರೂಪುರೇಷೆ

ಅಂತೆಯೇ, ತಮಗೆ ಒದಗಿಸಿದ್ದ ಸರ್ಕಾರಿ ಬಂಗಲೆಯನ್ನು ಏಪ್ರಿಲ್ 22ರೊಳಗೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿತ್ತು. ಇಂದು ದೆಹಲಿಯ 12 ತುಘಲಕ್ ಲೇನ್ ಬಂಗಲೆಯಿಂದ ರಾಹುಲ್ ಗಾಂಧಿ ಅವರ ವಸ್ತುಗಳನ್ನು ಖಾಲಿ ಮಾಡಲಾಗಿದೆ. ಹಲವು ಗೃಹೋಪಯೋಗಿ ವಸ್ತುಗಳನ್ನು ಹೊತ್ತ ಟ್ರಕ್‌ಗಳ ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಅವರ 10 ಜನಪಥ್ ನಿವಾಸಕ್ಕೆ ಸಾಗಿಸಿವೆ.

ಇದನ್ನೂ ಓದಿ:2 ವರ್ಷದ ಜೈಲು ಶಿಕ್ಷೆ ತಡೆ ಕೋರಿ ರಾಹುಲ್​ ಅರ್ಜಿ: ತೀರ್ಪು ಕಾಯ್ದಿರಿಸಿದ ಸೂರತ್​​ ಕೋರ್ಟ್​​

ಏಪ್ರಿಲ್ 20ಕ್ಕೆ ತೀರ್ಪು ಪ್ರಕಟ:ಮತ್ತೊಂದೆಡೆ,ರಾಹುಲ್​ ಗಾಂಧಿತಮಗೆ ವಿಧಿಸಲಾದ ಎರಡು ವರ್ಷ ಜೈಲು ಶಿಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸೂರತ್ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದೇ ವೇಳೆ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಬಿನ್ ಮೊಗೇರ ಅವರು ವಾದ ಮತ್ತು ಪ್ರತಿವಾದವನ್ನು ಆಲಿಸಿ, ಏಪ್ರಿಲ್ 20ಕ್ಕೆ ತಮ್ಮ ತೀರ್ಪು ಕಾಯ್ದಿರಿಸಿದ್ದಾರೆ.

ಪೂರ್ಣೇಶ್​ ಮೋದಿ ಆಕ್ಷೇಪಣೆ ಯಾಕೆ?:ರಾಹುಲ್​ ವಿರುದ್ಧದ ಆದೇಶಕ್ಕೆ ತಡೆ ನೀಡಬಾರದು ಎಂದುಪೂರ್ಣೇಶ್​ ಮೋದಿ ಸಲ್ಲಿಸಿದ ಆಕ್ಷೇಪಣಾ ಅರ್ಜಿಯಲ್ಲಿ ಹಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ. ರಾಹುಲ್​ ಗಾಂಧಿ ಶಿಕ್ಷೆಗೆ ಒಳಗಾದ ಬಳಿಕವೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆ ಹೇಳಿಕೆ ನೀಡುತ್ತಲೇ ಇದ್ದಾರೆ. ಮಾನಹಾನಿ ಮಾತುಗಳನ್ನು ಅವರು ಮುಂದುವರಿಸಿದ್ದಾರೆ. ನ್ಯಾಯಾಲಯದ ಹೇಳಿಕೆಯನ್ನು ಪ್ರಸ್ತಾಪಿಸಿ ವಾಕ್​ ಸ್ವಾತಂತ್ರ್ಯದ ಹೆಸರಿನಲ್ಲಿ ಅವರು ಕುಚೋದ್ಯ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಈಗ ನೀಡಿರುವ ಶಿಕ್ಷೆಗೆ ಯಾವ ಕಾರಣಕ್ಕೂ ತಡೆ ನೀಡಬಾರದು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ವಿರುದ್ಧ ಪೂರ್ಣೇಶ್​ ಮೋದಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕ್ರಿಮಿನಲ್​ ಪ್ರಕರಣದಲ್ಲಿ ರಾಹುಲ್​ ಅವರನ್ನು ದೋಷಿ ಎಂದು ಪರಿಗಣಿಸಿದ್ದ ಸೂರತ್​ ಕೋರ್ಟ್​, ಮಾರ್ಚ್​ 23ರಂದು ಎರಡು ವರ್ಷ ಶಿಕ್ಷೆ ಮತ್ತು ದಂಡ ವಿಧಿಸಿತ್ತು.

ಇದನ್ನೂ ಓದಿ:ಬಿಜೆಪಿ ಸಂಸದ ಸ್ಥಾನ ಕಿತ್ತುಕೊಳ್ಳಬಹುದು, ಜನರನ್ನು ಪ್ರತಿನಿಧಿಸುವುದನ್ನು ತಡೆಯಲು ಸಾಧ್ಯವಿಲ್ಲ: ರಾಹುಲ್​​​

Last Updated : Apr 14, 2023, 7:04 PM IST

ABOUT THE AUTHOR

...view details