ನವದೆಹಲಿ :ಪಂಚರಾಜ್ಯ ಚುನಾವಣೆಗಳಲ್ಲಿ ಸೋಲನ್ನನುಭವಿಸಿದ ಬೆನ್ನಲ್ಲೇ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರದಂದು ಗುಜರಾತ್ ರಾಜ್ಯ ಘಟಕದ ನಾಯಕರನ್ನು ಭೇಟಿ ಮಾಡಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆ ಮತ್ತು ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ. ಪಕ್ಷದ ಚುನಾವಣಾ ಸವಾಲುಗಳು ಮತ್ತು ಅವುಗಳನ್ನು ಹೇಗೆ ಎದುರಿಸಲಾಗುತ್ತಿದೆ ಎಂಬುದನ್ನು ಗುಜರಾತ್ ರಾಜ್ಯ ನಾಯಕರು ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದರು.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನನುಭವಿಸಿದ ಹಿನ್ನೆಲೆ ಈ ಸಭೆ ನಡೆದಿದೆ. ಉತ್ತರಪ್ರದೇಶ,ಉತ್ತರಾಖಂಡ, ಗೋವಾ ಮತ್ತು ಮಣಿಪುರ, ಪಂಜಾಬ್‌ನಲ್ಲಿ ಕಾಂಗ್ರೆಸ್ ಸೋಲನ್ನ ಅನುಭವಿಸಿದ್ದು, ಮುಂದಿನ ಚುನಾವಣೆಗಳಿಗೆ ಸಿದ್ಧತೆ ಕೈಗೊಂಡಿದೆ.