ಕರ್ನಾಟಕ

karnataka

ETV Bharat / bharat

ನ್ಯಾಷನಲ್​​ ಹೆರಾಲ್ಡ್​​ ಕೇಸ್​​: 10 ತಾಸು ರಾಹುಲ್​ಗೆ ಇಡಿ ಡ್ರಿಲ್​​... ಇಂದೂ ವಿಚಾರಣೆ ಸಾಧ್ಯತೆ - Rahul Gandhi to appear before ED again today

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ 10 ಗಂಟೆಗಳ ಕಾಲ ವಿಚಾರಣೆ ನಡೆಸಿತು.

Rahul Gandhi
ರಾಹುಲ್ ಗಾಂಧಿ

By

Published : Jun 14, 2022, 9:12 AM IST

ನವದೆಹಲಿ: ನ್ಯಾಷನಲ್​​ ಹೆರಾಲ್ಡ್​​ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ ಮುಖಂಡ ರಾಹುಲ್​​ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ 10 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ಅಪೂರ್ಣವಾಗಿದ್ದು, ಮಂಗಳವಾರ ಮತ್ತೆ ಇಡಿ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ವಿಚಾರಣೆ ವಿರುದ್ಧ ಇಡಿ ಕಚೇರಿ ಹಾಗೂ ದೇಶಾದ್ಯಂತ ಕಾಂಗ್ರೆಸ್​​ ಕಾರ್ಯಕರ್ತರು ಪ್ರತಿಭಟನೆ ನಡೆೆಸಿದರು.

ಮೊದಲ ಬಾರಿಗೆ ಕೇಂದ್ರ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ ಸೋಮವಾರ ಬೆಳಗ್ಗೆ 11.10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಇಡಿ ಕಚೇರಿಯಲ್ಲಿಯೇ ಇದ್ದರು. ವಿಚಾರಣೆ ಮಧ್ಯೆ 80 ನಿಮಿಷಗಳ ಕಾಲ ವಿರಾಮ ನೀಡಲಾಗಿತ್ತು. ಇಡಿ ಕಚೇರಿಗೆ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ನಾಯಕರು ಮತ್ತು ಶಸ್ತ್ರಸಜ್ಜಿತ ಸಿಆರ್‌ಪಿಎಫ್ ಸಿಬ್ಬಂದಿಯೊಂದಿಗೆ ಹಾಜರಾಗಿದ್ದರು.

ಗೆಹ್ಲೋಟ್​, ಬಘೇಲ್​​​​​​​​​ ನೇತೃತ್ವದಲ್ಲಿ ಭಾರಿ ಪ್ರತಿಭಟನೆ:ದೆಹಲಿ ಮತ್ತು ರಾಜ್ಯ ರಾಜಧಾನಿಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಣದೀಪ್ ಸುರ್ಜೆವಾಲಾ ಮತ್ತು ಕೆ ಸಿ ವೇಣುಗೋಪಾಲ್ ಸೇರಿದಂತೆ ಹಲವಾರು ಹಿರಿಯ ನಾಯಕರನ್ನು ಪಕ್ಷದ ಬೃಹತ್ ಶಕ್ತಿ ಪ್ರದರ್ಶನದ ನಡುವೆ ಅವರನ್ನು ಬಂಧಿಸಲಾಯಿತು. ವಿರೋಧ ಪಕ್ಷವು ತನ್ನ ಕೆಲವು ನಾಯಕರನ್ನು ಪೊಲೀಸರು ಅಮಾನುಷವಾಗಿ ನಡೆಸಿಕೊಂಡಿದ್ದು, ಶಾಂತಿಯುತ ಪ್ರತಿಭಟನೆಗಳಿಗೆ ಅನುಮತಿ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಕಚೇರಿಯಿಂದ ಹೊರಬಂದ ಕೂಡಲೇ ರಾತ್ರಿ 11.30 ರ ಸುಮಾರಿಗೆ ಪಕ್ಷದ ಪ್ರಮುಖ ನಾಯಕರನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲಾಯಿತು. 26 ಸಂಸದರು ಮತ್ತು ಐದು ಶಾಸಕರು ಸೇರಿದಂತೆ 459 ಜನರನ್ನು ಬಂಧಿಸಲಾಗಿದೆ ಮತ್ತು ಎಲ್ಲಾ ಮಹಿಳೆಯರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ವಾಗ್ದಾಳಿ:ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು ನೀಡಿದ್ದು, ಕೈ ನಾಯಕರು ಇಡಿ ಮೇಲೆ ಒತ್ತಡ ಹೇರುತ್ತಿದ್ದಾರೆ. ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದ್ದಾರೆ. ಗಾಂಧಿ ಕುಟುಂಬದ 2,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದೆ.

'ರಾಹುಲ್ ಗಾಂಧಿ ಏನು ಕಾನೂನಿಗಿಂತ ಮೇಲಲ್ಲ ಎಂದ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಜಕೀಯ ಕುಟುಂಬವು ತನ್ನ ಅಕ್ರಮವನ್ನು ರಕ್ಷಿಸಲು ವಿಮೋಚನೆಗಾಗಿ ತನಿಖಾ ಸಂಸ್ಥೆಯನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನವನ್ನು ಹಿಂದೆಂದೂ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ED ಕಚೇರಿ ತಲುಪಿದ ರಾಹುಲ್​​ ಗಾಂಧಿ: ಎಐಸಿಸಿಯಲ್ಲಿ ಪ್ರತಿಧ್ವನಿಸಿದ ರಾಹುಲ್ ಗಾಂಧಿ ಜಿಂದಾಬಾದ್ ಹಾಡು

ABOUT THE AUTHOR

...view details