ಹರಿದ್ವಾರ(ಉತ್ತರಾಖಂಡ):ಕೇಂದ್ರ ಸರ್ಕಾರ ಸಿಬಿಐ, ಇಡಿ ಸಂಸ್ಥೆಗಳನ್ನು ಬಳಸಿಕೊಂಡು ನಮ್ಮನ್ನು ಎದುರಿಸಲಾಗಲ್ಲ. ಕೇಂದ್ರದ ಒತ್ತಡ ತಂತ್ರಕ್ಕೆ ನಾನು ತಲೆಬಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಇಡಿ, ಸಿಬಿಐ ಅಧಿಕಾರಿಗಳನ್ನು ಬಳಸಿಕೊಂಡು ನಮ್ಮ ಮೇಲೆ ಸವಾರಿ ಮಾಡಲಾಗಲ್ಲ. ಸಾಂವಿಧಾನಿಕ ಸಂಸ್ಥೆಗಳಿಂದ ಒತ್ತಡ ಹೇರುವ ಕೇಂದ್ರದ ತಂತ್ರ ಫಲಿಸಲ್ಲ. ಈ ಬಗ್ಗೆ ನಾನು ಎಂದಿಗೂ ಕುಗ್ಗುವ ವ್ಯಕ್ತಿಯಲ್ಲ ಎಂದು ಗುಡುಗಿದ್ದಾರೆ.
ಸಂಸತ್ ಕಲಾಪದಲ್ಲಿ ಭಾಗಿಯಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನೆಗೆ ಹೇಗೆ ಉತ್ತರಿಸಲಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ 'ರೈತರ ಸಂಕಷ್ಟದ ಬಗ್ಗೆ ಕೇಳಿಸಿಕೊಳ್ಳದ ಪ್ರಧಾನಿ ಮಾತನ್ನು ನಾನೇಕೆ ಕೇಳಿಸಿಕೊಳ್ಳಲಿ' ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.