ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ಎಲ್ಲಾ ಸಾರ್ವಜನಿಕ ಚುನಾವಣಾ ರ‍್ಯಾಲಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರದ್ದುಗೊಳಿಸಿದ್ದಾರೆ.
"ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾನು ಬಂಗಾಳದಲ್ಲಿ ನನ್ನ ಎಲ್ಲಾ ಸಾರ್ವಜನಿಕ ರ‍್ಯಾಲಿಗಳನ್ನು ಮೊಟಕುಗೊಳಿಸುತ್ತಿದ್ದೇನೆ. ಪ್ರಸ್ತುತ ಪರಿಸ್ಥಿತಿಯಲ್ಲಿ ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವುದರಿಂದಾಗುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸುವಂತೆ ನಾನು ಎಲ್ಲಾ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.