ನವದೆಹಲಿ:ಅರುಣಾಚಲ ಪ್ರದೇಶದ ಮೂಲದ ಯುವಕನನ್ನು ಚೀನಾದ ಸೇನೆ ಅಪಹರಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಣರಾಜ್ಯೋತ್ಸವಕ್ಕೆ ಮುನ್ನ ಚೀನಾ ಸೇನೆ ಭಾರತೀಯ ವ್ಯಕ್ತಿಯನ್ನು ಅಪಹರಿಸಿದೆ. ಆದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅಪಹರಣಕ್ಕೆ ಒಳಗಾದ ವ್ಯಕ್ತಿಯ ಕುಟುಂಬದೊಂದಿಗೆ ಇದ್ದೇವೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್ನಲ್ಲಿ ಹರಿಹಾಯ್ದಿದ್ದಾರೆ.