ಕರ್ನಾಟಕ

karnataka

Manipur Violence: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಜೂನ್ 29-30ರಂದು ರಾಹುಲ್ ಗಾಂಧಿ ಭೇಟಿ

By

Published : Jun 28, 2023, 6:17 AM IST

Updated : Jun 28, 2023, 6:49 AM IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಜೂನ್ 29-30ರಂದು ರಾಹುಲ್ ಗಾಂಧಿ ಭೇಟಿ
rahul-gandhi-to-visit-violence-hit-manipur

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30ರಂದು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದ ಜನರನ್ನು ಭೇಟಿ ಮಾಡಿ, ಸಾಮಾಜಿಕ ಸಂಘಟನೆಗಳದ ಸದಸ್ಯರೊಂದಿಗೆ ರಾಹುಲ್​ ಸಂವಾದ ನಡೆಸಲಿದ್ದಾರೆ.

ಪರಿಶಿಷ್ಟ ಪಂಗಡ ಮೀಸಲಾತಿ ವಿವಾದದಿಂದ ಮೇ 3ರಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಮೈತಿಯಿ ಸಮುದಾಯ ಹಾಗೂ ಬುಡಕಟ್ಟಿನ ಕುಕಿ ಸಮುದಾಯದ ನಡುವೆ ಸಂಘರ್ಷ ಭುಗಿಲೆದಿದ್ದೆ. ರಾಜ್ಯಾದ್ಯಂತ ಹಿಂಸಾತ್ಮಕ ಘರ್ಷಣೆಗಳು ನಡೆದು ಇದುವರೆಗೆ 120ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 3,000 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಹಿಂಸಾಚಾರ ಪೀಡಿತ ಸ್ಥಳಗಳಿಂದ ಬೇರೆಡೆ ತೆರಳಿ ಆಶ್ರಯ ಪಡೆದಿದ್ದಾರೆ. ಈ ಹಿಂಸಾಚಾರದ ನಂತರ ಕಾಂಗ್ರೆಸ್ ನಾಯಕರು ಮಣಿಪುರಕ್ಕೆ ಮೊದಲ ಭೇಟಿ ನೀಡುತ್ತಿದ್ದಾರೆ.

ರಾಹುಲ್​ ಗಾಂಧಿ ಮಣಿಪುರ ಭೇಟಿ ಬಗ್ಗೆ ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಹಿತಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ತಮ್ಮ ಭೇಟಿಯ ಸಮಯದಲ್ಲಿ ಇಂಫಾಲ್ ಮತ್ತು ಚುರಚಂದಪುರದಲ್ಲಿ ಪರಿಹಾರ ಶಿಬಿರಗಳಿಗೆ ತೆರಳಲಿದ್ದಾರೆ. ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:Manipur Violence: ಮಣಿಪುರದಲ್ಲಿ ಪರಿಸ್ಥಿತಿ ನಿಯಂತ್ರಣ.. ಜೂ.13ರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ: ಅಮಿತ್ ಶಾ ಭೇಟಿಯಾದ ಸಿಎಂ ಬಿರೇನ್ ಸಿಂಗ್

ಮಣಿಪುರವು ಸುಮಾರು ಎರಡು ತಿಂಗಳಿನಿಂದ ಉರಿಯುತ್ತಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಲು ತನ್ಮೂಲಕ ಗುಣಪಡಿಸುವ ಸ್ಪರ್ಶದ ಅಗತ್ಯವಿದೆ. ಇದೊಂದು ಮಾನವೀಯ ದುರಂತವಾಗಿದೆ. ದ್ವೇಷವಲ್ಲ ಪ್ರೀತಿಯ ಶಕ್ತಿಯಾಗಿರುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ವೇಣುಗೋಪಾಲ್ ಟ್ವೀಟ್​​ನಲ್ಲಿ ತಿಳಿಸಿದ್ದಾರೆ. ಮತ್ತೊಂದೆಡೆ, ಮಣಿಪುರದ ಪ್ರಸ್ತುತ ಪರಿಸ್ಥಿತಿಗೆ ಬಿಜೆಪಿ ಮತ್ತು ಅದರ ಒಡೆದು ಆಳುವ ರಾಜಕೀಯ ಕಾರಣವೆಂದು ಈ ಹಿಂದೆ ಕಾಂಗ್ರೆಸ್ ದೂಷಿಸಿದೆ. ಜೊತೆಗೆ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದರೆ, ಸಮಾಜವಾದಿ ಪಕ್ಷ ಮತ್ತು ಇತರರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲು ಆಗ್ರಹಿಸಿದ್ದರು.

ಇದೇ ಶನಿವಾರ ಮಣಿಪುರ ಪರಿಸ್ಥಿತಿ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಡಪಕ್ಷಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಮಣಿಪುರದಲ್ಲಿ ಶಾಂತಿ ಮತ್ತು ಸಹಜ ಸ್ಥಿತಿಗೆ ಮರಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅಮಿತ್​ ಶಾ ವಿಪಕ್ಷ ನಾಯಕರಿಗೆ ಭರವಸೆ ನೀಡಿದ್ದರು.

ಇದನ್ನೂ ಓದಿ:Manipur Violence: ಮಣಿಪುರ ಪರಿಸ್ಥಿತಿ ಕುರಿತು ಸರ್ವಪಕ್ಷ ಸಭೆ ನಡೆಸಿದ ಅಮಿತ್‌ ಶಾ: ಶಾಂತಿ ಸ್ಥಾಪನೆಗೆ ಅಗತ್ಯ ಕ್ರಮದ ಭರವಸೆ

Last Updated : Jun 28, 2023, 6:49 AM IST

ABOUT THE AUTHOR

...view details