ನವದೆಹಲಿ:ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಮಾಜಿ ಕಾಂಗ್ರೆಸ್ ಮುಖ್ಯಸ್ಥ ರೈತರ ಹೆಸರಿನಲ್ಲಿ ಜನರನ್ನು ಕೆರಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಹುಲ್ಗೆ ಟಾಂಗ್ ನೀಡಿದೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಕಾಂಗ್ರೆಸ್ ಮುಖಂಡರು "ರೈತರ" ಹೆಸರಿನಲ್ಲಿ ಜನರನ್ನು ಕೆರಳಿಸಲು ಪ್ರಯತ್ನಿಸುತ್ತಿದ್ದಾರೆ. ರೈತರ ಭುಜದ ಮೇಲೆ ಬಂದೂಕುಗಳನ್ನು ಇಟ್ಟು ರಾಜಕೀಯ ಅಸ್ತ್ರ ಪ್ರಯೋಗ ಮಾಡುವ ರಾಹುಲ್ ಗಾಂಧಿ, ರಾಜಕೀಯದ ಆಟದಲ್ಲಿ ಅಂಕ ಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.