ನವದೆಹಲಿ:ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರ ಫೋಟೊ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.
ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊದೊಂದಿಗೆ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಮಾಡಿದ್ದ ಪೋಸ್ಟ್ನ್ನು ಟ್ವಿಟರ್ ತೆಗೆದು ಹಾಕಿತ್ತು. ಇದಾದ ಮರುದಿನವೇ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.
'ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಅದನ್ನು ಸರಿಪಡಿಸಲು ಎಲ್ಲ ಕಾರ್ಯ ನಡೆಯುತ್ತಿದೆ. ಅಲ್ಲಿಯವರೆಗೂ ರಾಹುಲ್ ಅವರು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಎಲ್ಲರ ಜೊತೆ ಸಂಪರ್ಕದಲ್ಲಿರುತ್ತಾರೆ. ಜನರಿಗಾಗಿ ಮತ್ತು ಅವರ ಹಕ್ಕುಗಳಿಗಾಗಿ ದನಿಯೆತ್ತುವುದನ್ನು ಮುಂದುವರೆಸುತ್ತಾರೆ. ಜೈ ಹಿಂದ್’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
ಬಳಿಕ ಮತ್ತೊಂದು ಟ್ವೀಟ್ ಮೂಲಕ ರಾಹುಲ್ ಅವರ ಖಾತೆಯು ಲಾಕ್ ಆಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಇದನ್ನೂ ಓದಿ:MRP ದರ ಪ್ರಕಟಿಸದ ಟ್ರ್ಯಾಕ್ಟರ್ ಡೀಲರ್ಗಳಿಗೆ ಬಿಸಿ ಮುಟ್ಟಿಸಿದ ಸಚಿವೆ ಶೋಭಾ ಕರಂದ್ಲಾಜೆ