ಇಂಫಾಲ, ಮಣಿಪುರ:ಇಂದಿನಿಂದ ಎರಡು ದಿನಗಳ ಕಾಲ ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ, ಅವರು ಪರಿಹಾರ ಶಿಬಿರಗಳಲ್ಲಿ ಜಾತಿ ಹಿಂಸಾಚಾರದಿಂದ ಸ್ಥಳಾಂತರಗೊಂಡ ಜನರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಅವರು ನಾಗರಿಕ ಸಮಾಜ ಸಂಸ್ಥೆಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಪಕ್ಷದ ಮೂಲವೊಂದು ಈ ಮಾಹಿತಿ ನೀಡಿದ್ದು, ಮೇ 3 ರಿಂದ ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ನಂತರ ಈಶಾನ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ಮೊದಲ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಬುಧವಾರ, ಇಂಫಾಲ್ ತಲುಪಿದ ನಂತರ ರಾಹುಲ್ ಗಾಂಧಿ ಚುರಾಚಂದಪುರಕ್ಕೆ ತೆರಳಲಿದ್ದು, ಅಲ್ಲಿ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ವಿಷ್ಣುಪುರ ಜಿಲ್ಲೆಯ ಮೊಯಿರಾಂಗ್‌ಗೆ ತೆರಳಿ ನಿರಾಶ್ರಿತ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.
ಈ ವರ್ಷದ ಮೇನಲ್ಲಿ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಭುಗಿಲೆದ್ದ ನಂತರ ಸುಮಾರು 50,000 ಜನರು 300 ಕ್ಕೂ ಹೆಚ್ಚು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಮೈತೆ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಇದುವರೆಗೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೇ 3 ರಂದು ಮಣಿಪುರದಲ್ಲಿ ಮೈತೆ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಐಕಮತ್ಯದ ಮೆರವಣಿಗೆ' ನಡೆಸಲಾಯಿತು. ಇದಾದ ನಂತರ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿದವು.