ನವದೆಹಲಿ: ಹಣದುಬ್ಬರ ಮತ್ತು ನಿರುದ್ಯೋಗದ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ವಾಗ್ದಾಳಿಯನ್ನು ತೀವ್ರಗೊಳಿಸಿದ್ದಾರೆ. ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೇಗೆ ಹಾಳುಮಾಡಬಹುದು ಎಂಬುದಕ್ಕೆ ಕೇಂದ್ರ ಸರ್ಕಾರದ ದುರಾಡಳಿತ ಉದಾಹರಣೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ದೇಶದಲ್ಲಿ ಬಿಸಿಲಿನ ಬೇಗೆ ಹೆಚ್ಚುತ್ತಿರುವ ಬೆನ್ನಲ್ಲೇ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಇದನ್ನು ಗುರಿಯಾಗಿಸಿಕೊಂಡು ಈ ಟ್ವೀಟ್ ಮಾಡಿದ್ದಾರೆ.
ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದಕ್ಕೆ ಮೋದಿ ಸರ್ಕಾರ ಉದಾಹರಣೆ: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬೇಕು ಎಂಬುದಕ್ಕೆ ಸಾಕ್ಷಿ ಎಂದು ಹರಿಹಾಯ್ದಿದ್ದಾರೆ.
ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೇಗೆ ಹಾಳು ಮಾಡಬಹುದು ಎಂಬುದಕ್ಕೆ ಮೋದಿ ಸರ್ಕಾರ ಉದಾಹರಣೆ: ರಾಹುಲ್ ಗಾಂಧಿ
ವಿದ್ಯುತ್ ಬಿಕ್ಕಟ್ಟು, ಉದ್ಯೋಗದ ಬಿಕ್ಕಟ್ಟು, ರೈತರ ಬಿಕ್ಕಟ್ಟು, ಹಣದುಬ್ಬರ ಬಿಕ್ಕಟ್ಟು ಎಂದು ಬರೆದಿರುವ ಅವರು, ಎಂಟು ವರ್ಷಗಳ ದುರಾಡಳಿತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೇಗೆ ಹಾಳು ಮಾಡಿದೆ ಎಂಬುದಕ್ಕೆ ಉದಾಹರಣೆಯಾಗಿದೆ ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಇದನ್ನೂ ಓದಿ:ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಸಚಿವರ ಸಹೋದರನ ಹೆಸರು : ಪ್ರತಿಕ್ರಿಯೆಗೆ ಸಿಎಂ ನಕಾರ