ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಹಾಗೂ ರೈಲುಗಳಲ್ಲಿ ಸಂಚಾರ ಮಾಡುವಾಗ ಮಾಸ್ಕ್ ಹಾಕದಿದ್ದರೆ 500 ರೂ. ದಂಡ ವಿಧಿಸುವ ನಿಯಮ ಈಗಾಗಲೇ ರೈಲ್ವೆ ಇಲಾಖೆಯಿಂದ ನಿಯಮ ಜಾರಿಯಲ್ಲಿದ್ದು, ಮುಂದಿನ ಆರು ತಿಂಗಳ ಕಾಲ ಈ ಮಾನದಂಡ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಕೇಂದ್ರ ರೈಲ್ವೆ ಇಲಾಖೆಯಿಂದ ಕೋವಿಡ್ ನಿಯಮ ಜಾರಿಯಾಗಿದ್ದ ಸಂದರ್ಭದಲ್ಲಿ ರೈಲ್ವೆ ಪ್ಲಾಟ್ ಫಾರ್ಮ್, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಕಡ್ಡಾಯಗೊಳಿಸಿತ್ತು. ಒಂದು ವೇಳೆ ಈ ನಿಯಮ ಪಾಲನೆ ಮಾಡುವಲ್ಲಿ ವಿಫಲಗೊಂಡರೆ ಅಂತವರಿಗೆ 500 ರೂ. ದಂಡ ವಿಧಿಸಲಾಗುವುದು ಎಂದು ಹೇಳಿತ್ತು. ಈ ನಿಯಮ ರೈಲ್ವೆ ಇಲಾಖೆಯಿಂದ ಮುಂದುವರಿಕೆಯಾಗಲಿದ್ದು, 2022ರ ಏಪ್ರಿಲ್ 17ರವರೆಗೆ ಜಾರಿಯಲ್ಲಿರಲಿದೆ. ಇದರ ಜೊತೆಗೆ ರೈಲ್ವೆ ಸ್ಟೇಷನ್ಗಳಲ್ಲಿ ಉಗುಳುವವರಿಗೆ 500 ರೂ ದಂಡ ವಿಧಿಸುವ ನಿಯಮ ಕೂಡ ಮುಂದುವರೆಯಲಿದೆ.