ಅಮರಾವತಿ (ಆಂಧ್ರ ಪ್ರದೇಶ): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ 'ಅಸನಿ' ಚಂಡಮಾರುತ ಆಂಧ್ರಪ್ರದೇಶದ ಕರಾವಳಿ ಸಮೀಪಿಸುತ್ತಿದ್ದಂತೆ ತನ್ನ ಪಥವನ್ನು ಬದಲಾಯಿಸುತ್ತಿದೆ. ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹವಾಮಾನ ವೀಕ್ಷಣ ಕೇಂದ್ರದ ಪ್ರಕಾರ, ಬುಧವಾರ ಸಂಜೆಯ ವೇಳೆಗೆ ಚಂಡಮಾರುತವು ಕಾಕಿನಾಡ ಕರಾವಳಿ ದಾಟಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆ ಆಂಧ್ರಪ್ರದೇಶ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಕರಾವಳಿಯನ್ನು ದಾಟಿದ ನಂತರ, ಚಂಡಮಾರುತವು ವಿಶಾಖಪಟ್ಟಣಂ ಬಳಿ ಬಂಗಾಳಕೊಲ್ಲಿಯಲ್ಲಿ ಮರುಕಳಿಸುವ ಸಾಧ್ಯತೆಯಿದೆ. ತೆಲಂಗಾಣದ ನಲ್ಗೊಂಡ, ಸೂರ್ಯಪೇಟ್, ಭದ್ರಾದ್ರಿ ಕೊತಗುಡೆಂ, ಖಮ್ಮಂ ಮತ್ತು ಮುಲುಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಮತ್ತು ದಕ್ಷಿಣ ಕರಾವಳಿ ಆಂಧ್ರದ ಕೆಲವು ಭಾಗಗಳಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಮಚಲಿಪಟ್ಟಣಂನಲ್ಲಿಯೂ ಮಳೆ ಮತ್ತು ಬಿರುಗಾಳಿ ಬೀಸಿದೆ.