ಮುಂಬೈ:ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸರ ವಶದಲ್ಲಿದ್ದು, ಇದೀಗ ನ್ಯಾಯಾಲಯ ಅವರನ್ನು ಜುಲೈ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮಾಡೆಲ್‌ಗಳನ್ನು ಬಳಸಿಕೊಂಡು ನೀಲಿ ಚಿತ್ರ ನಿರ್ಮಿಸಿ ಅವುಗಳನ್ನು ಆ್ಯಪ್ಗಳಿಗೆ ಮಾರಾಟ ಮಾಡುತ್ತಿದ್ದ ಗಂಭೀರ ಪ್ರಕರಣದಲ್ಲಿ ರಾಜ್ ಕುಂದ್ರಾ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿಂದೆತೆ ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು ಆರೋಪಿಯನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸಲಿದ್ದಾರೆ.
ಆರೋಪ ಸಾಬೀತಾದ್ರೆ 7 ವರ್ಷ ಜೈಲುಶಿಕ್ಷೆ
ರಾಜ್ ಕುಂದ್ರಾ ಗಂಭೀರ ಪ್ರಕರಣದಲ್ಲಿ ಬಂಧಿತರಾಗಿದ್ದು, ಅವರ ಮೇಲಿನ ಆರೋಪ ಸಾಬೀತಾಗಿದ್ದೇ ಆದಲ್ಲಿ 7 ವರ್ಷಗಳ ಕಾಲ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ. ಈಗಾಗಲೇ ಕುಂದ್ರಾ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ(IPC Sections) 292, 293, 420, 34 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ(IT Act) u/s 2(g), 3, 4, 6, 7ರ ಅಡಿ ಪ್ರಕರಣ ದಾಖಲಿಸಿದ್ದಾರೆ.