ಜೈಪುರ:ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ಗೂ ಕೋವಿಡ್ ದೃಢ - Rajasthan Chief Minister Ashok Gehlot tests positive for COVID-19
ಪತ್ನಿಯ ಬಳಿಕ ತಮಗೂ ಕೊರೊನಾ ಸೋಂಕು ತಗುಲಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ಗೂ ಕೋವಿಡ್ ದೃಢ
ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿರುವ ಸಿಎಂ ಅಶೋಕ್ ಗೆಹ್ಲೋಟ್, ನನ್ನ ಕೋವಿಡ್ ವರದಿಯೂ ಪಾಸಿಟಿವ್ ಬಂದಿದೆ. ನನಗೆ ಯಾವುದೇ ರೋಗ ಲಕ್ಷಣಗಳಿಲ್ಲ, ನಾನು ಆರೋಗ್ಯವಾಗಿದ್ದೇನೆ. ಆದರೂ ಕೋವಿಡ್ ಪ್ರೋಟೋಕಾಲ್ ಪ್ರಕಾರ ನಾನು ಹೋಂ ಕ್ವಾರಂಟೈನ್ ಆಗಿದ್ದು, ಮನೆಯಿಂದಲೇ ಕೆಲಸ ನಿರ್ವಹಿಸುವೆ ಎಂದು ತಿಳಿಸಿದ್ದಾರೆ.
ನಿನ್ನೆ ಸಂಜೆ ಗೆಹ್ಲೋಟ್ರ ಪತ್ನಿ ಸುನೀತಾ ಗೆಹ್ಲೋಟ್ರ ವರದಿ ಕೂಡ ಪಾಸಿಟಿವ್ ಬಂದಿತ್ತು. ಆ ಬಳಿಕ ಅಶೋಕ್ ಗೆಹ್ಲೋಟ್ ಅವರು ಐಸೋಲೇಷನ್ಗೆ ಒಳಗಾಗಿದ್ದರು.