ಜೈಪುರ ( ರಾಜಸ್ಥಾನ) : ಎರಡು ದಿನಗಳ ರಾಜಸ್ಥಾನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಮಧ್ಯೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸಿಕರ್‌ನಲ್ಲಿ ನಡೆಯಲಿರುವ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ನಮ್ಮ ಭಾಷಣವನ್ನು ರದ್ದುಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಕಚೇರಿ (ಪಿಎಂಓ), ಗೆಹ್ಲೋಟ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಅವರಿಗೆ ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ರಾಜಸ್ಥಾನ ಸಿಎಂ ಕಚೇರಿ ಮಾಹಿತಿ ನೀಡಿದೆ. ಒಂದು ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾದರೆ ಸ್ವಾಗತ ಕೋರುತ್ತೇವೆ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಿಕರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗೆಹ್ಲೋಟ್ ಅವರು ತಮ್ಮ ಭಾಷಣದ ಮೂಲಕ ಪ್ರಧಾನಿ ಮೋದಿ ಅವರನ್ನು ಸಾಧ್ಯವಾಗುವುದಿಲ್ಲವಾದ್ದರಿಂದ ಟ್ವೀಟ್ ಮೂಲಕ ರಾಜಸ್ಥಾನಕ್ಕೆ ಮೋದಿಯವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ತಮ್ಮ ಟ್ವೀಟ್ನಲ್ಲಿ "ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ಇಂದು ನೀವು ರಾಜಸ್ಥಾನಕ್ಕೆ ಭೇಟಿ ನೀಡುತ್ತಿರುವಿರಿ. ನಿಮ್ಮ ಕಚೇರಿ ವಿವಿಧ ಕಾರ್ಯಕ್ರಮದಿಂದ ನನ್ನ ಪೂರ್ವ ನಿಗದಿತ ಮೂರು ನಿಮಿಷಗಳ ಭಾಷಣವನ್ನು ತೆಗೆದುಹಾಕಿದೆ. ಆದ್ದರಿಂದ ನಾನು ಭಾಷಣದ ಮೂಲಕ ನಿಮ್ಮನ್ನು ಸ್ವಾಗತಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಟ್ವೀಟ್ ಮೂಲಕ ನಾನು ನಿಮ್ಮನ್ನು ರಾಜಸ್ಥಾನಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ" ಎಂದು ಹೇಳಿದ್ದಾರೆ.