ಕರ್ನಾಟಕ

karnataka

ETV Bharat / bharat

ಕೊರೊನಾ ನೆಪ; ಆಸಾರಾಮ ಬಾಪು ಜಾಮೀನು ಅರ್ಜಿ ಮತ್ತೆ ವಜಾ - ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವಿವಾದಾತ್ಮಕ ಸ್ವ ಘೋಷಿತ ದೇವಮಾನವ ಅಸಾರಾಮ್ ಬಾಪು

ಕೊರೊನಾ ಪಾಸಿಟಿವ್​ ಬಂದ ಹಿನ್ನೆಲೆ ಕೇರಳದಲ್ಲಿ ಆಯುರ್ವೇದ ಶೈಲಿಯ ಚಿಕಿತ್ಸೆಗೆ ಒಳಗಾಗಬೇಕೆಂದು ಕೋರಿ ಎರಡು ತಿಂಗಳ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಆಸಾರಾಮ ಬಾಪು ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

rajasthan-hc-dismisses-asarams-bail-plea
rajasthan-hc-dismisses-asarams-bail-plea

By

Published : May 21, 2021, 3:19 PM IST

ಜೈಪುರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಆಸಾರಾಮ್ ಬಾಪು ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ವಜಾಗೊಳಿಸಿದೆ.

ಕೊರೊನಾ ಪಾಸಿಟಿವ್​ ಬಂದ ಹಿನ್ನೆಲೆ ಕೇರಳದಲ್ಲಿ ಆಯುರ್ವೇದ ಶೈಲಿಯ ಚಿಕಿತ್ಸೆಗೆ ಒಳಗಾಗಬೇಕೆಂದು ಕೋರಿ ಎರಡು ತಿಂಗಳ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ.

ಅರ್ಜಿಯನ್ನು ಆಧರಿಸಿ ಸಂಪೂರ್ಣ ವೈದ್ಯಕೀಯ ವರದಿಯನ್ನು ಸಲ್ಲಿಸುವಂತೆ ಜೋಧಪುರ್ ಏಮ್ಸ್​ಗೆ ಹೈಕೋರ್ಟ್ ಸೂಚನೆ ನೀಡಿತ್ತು. ನ್ಯಾಯಾಧೀಶ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ದೇವೇಂದ್ರ ಕಚ್ಚಾವಾ ಅವರನ್ನೊಳಗೊಂಡ ಹೈಕೋರ್ಟ್ ಪೀಠವು ಈಗ ಇವರ ಅರ್ಜಿಯನ್ನು ವಜಾಗೊಳಿಸಿದೆ. ಪ್ರಸ್ತುತ, ಜೋಧಪುರ್ ಏಮ್ಸ್​ನಲ್ಲಿ ಆಸಾರಾಮ ಬಾಪು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ 2013 ರಲ್ಲಿ ಬಂಧನಕ್ಕೊಳಗಾದ ನಂತರ ಬಾಪು ಜೋಧಪುರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ.

2013 ರಿಂದ ಈವರೆಗೆ ಹನ್ನೆರಡು ಬಾರಿ ಜಾಮೀನು ಪಡೆಯಲು ಪ್ರಯತ್ನಿಸಿದ್ದು, ಜಾಮೀನು ಅರ್ಜಿಯನ್ನು ಪ್ರತಿ ಬಾರಿಯೂ ವಜಾಗೊಳಿಸಲಾಗಿದೆ.

ABOUT THE AUTHOR

...view details