ಜೋಧ್‌ಪುರ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ಜೋಧಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದಕ್ಕೆ ರಾಜಸ್ಥಾನ ಹೈಕೋರ್ಟ್ ವಿಚಾರಣೆ ತಡೆಯಾಜ್ಞೆ ನೀಡಿದೆ.
ಕೃಷ್ಣಮೃಗ ಬೇಟೆ ಪ್ರಕರಣ: ಮೇಲ್ಮನವಿ ಅರ್ಜಿ ವಿಚಾರಣೆಗೆ ರಾಜಸ್ಥಾನ ಹೈಕೋರ್ಟ್ ತಡೆ - ಮೇಲ್ಮನವಿ ಅರ್ಜಿ ವಿಚಾರಣೆಗೆ ರಾಜಸ್ಥಾನ ಹೈಕೋರ್ಟ್ ತಡೆ
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದ ಮೂರು ಮೇಲ್ಮನವಿ ಅರ್ಜಿಗಳನ್ನು ಜೋಧ್‌ಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುತ್ತಿದ್ದು, ಇದಕ್ಕೆ ರಾಜಸ್ಥಾನ ಹೈಕೋರ್ಟ್ ತಡೆ ನೀಡಿದೆ.
1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಸಿನಿಮಾ ಶೂಟಿಂಗ್ ವೇಳೆ ಜೋಧಪುರ್ ಬಳಿಯ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದರು. ಬೇಟೆಯಾಡಲು ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು. ಅಕ್ರಮ ಶಸ್ತ್ರಾಸ್ತ್ರ ಬಳಕೆ ಮಾಡಿರುವ ಸಂಬಂಧ ಸಲ್ಮಾನ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದ ಮೂರು ಮೇಲ್ಮನವಿ ಅರ್ಜಿಗಳು ಜೋಧ್‌ಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಲ್ಲಿದೆ. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನೀಲಂ, ಟಬು, ಸೋನಾಲಿ ಮತ್ತು ಸೈಫ್ ಅಲಿ ಖಾನ್ ಅವರನ್ನು ಖುಲಾಸೆಗೊಳಿಸುವುದರ ವಿರುದ್ಧ ರಾಜ್ಯ ಸರ್ಕಾರವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅದಕ್ಕಾಗಿಯೇ ನಾವು ಒಂದೇ ಪ್ರಕರಣದಲ್ಲಿ ವಿಭಿನ್ನ ಮೇಲ್ಮನವಿಗಳಿವೆ. ಅವುಗಳನ್ನು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ನಾವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ. ನಮ್ಮ ಮನವಿಯ ಮೇರೆಗೆ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಕುಮಾರ್ ಈ ಮೇಲ್ಮನವಿಗಳ ವಿಚಾರಣೆಯನ್ನು ತಡೆಹಿಡಿಯಲು ಆದೇಶ ನೀಡಿದ್ದಾರೆ ಎಂದು ನಟ ಸಲ್ಮಾನ್ ಖಾನ್ ಪರ ವಕೀಲ ಹಸ್ತಿಮಲ್ ಸರಸ್ವತ್ ಹೇಳಿದ್ದಾರೆ.